ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ “ವೋಟ್ ಚೋರ್ ಗದ್ದಿ ಚೋಡ್” ಸಹಿ ಅಭಿಯಾನವನ್ನು ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಯಿತು.
ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಬಿಜೆಪಿ ದೇಶದಾದ್ಯಂತ ಮತಗಳ್ಳತನ ನಡೆಸಿ ಅಧಿಕಾರ ಹಿಡಿದಿದೆ. ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯನ್ನು ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಮಾರಕ. ಹೀಗಾಗಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಸಹಿ ಸಂಗ್ರಹಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸುತ್ತೇವೆ ಎಂದರು.
ಕಳೆದ ಬಾರಿ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರ ಮತ್ತು ಲೋಕಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಮತಗಳ್ಳತನ ನಡೆಸಿ ಗೆದ್ದಿರುವ ಅನುಮಾನವಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 10ರಷ್ಟು ಹೆಚ್ಚುವರಿ ಮತ ಚಲಾವಣೆಯಾಗಿತ್ತು. ಈ ರೀತಿಯ ಬೆಳವಣಿಗೆ ಹಿಂದಿನ ಯಾವುದೇ ಚುನಾವಣೆಯಲ್ಲೂ ಆಗಿರಲಿಲ್ಲ. ಇದು ಮತಗಳ್ಳತನಕ್ಕೆ ಪುಷ್ಟಿ ನೀಡುತ್ತಿದೆ ಎಂದು ದೂರಿದರು.
ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ ಮಾತನಾಡಿ, ಮಹಾರಾಷ್ಟ್ರ ಸಹಿತ ಬಿಜೆಪಿ ಅಧಿಕಾರ ಹಿಡಿದಿರುವ ಎಲ್ಲ ರಾಜ್ಯಗಳಲ್ಲಿಯೂ ಮತಗಳ್ಳತನ ನಡೆದಿದೆ. ಕರ್ನಾಟಕ ರಾಜ್ಯದಲ್ಲೂ ಮತಗಳ್ಳತನ ನಡೆಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ. ಬಿಜೆಪಿಯ ಈ ದುಷ್ಕೃತ್ಯವನ್ನು ಬಯಲಿಗೆಳೆಯದಿದ್ದರೆ ದೇಶ ಅಧೋಗತಿಗೆ ಹೋಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ಭುಜಂಗ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಡಾ. ಸುನೀತಾ ಶೆಟ್ಟಿ, ಬಿ. ಕುಶಲ ಶೆಟ್ಟಿ, ವಿಲಿಯಂ ಮಾರ್ಟಿಸ್, ಸತೀಶ್ ಕೊಡವೂರು, ಕೃಷ್ಣ ಶೆಟ್ಟಿ ಬಜಗೋಳಿ, ಪ್ರಖ್ಯಾತ್ ಶೆಟ್ಟಿ, ಸೌರಬ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…