Featured

ಉಡುಪಿ: ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ , ಪ್ರಜಾಧ್ವನಿ ಯಾತ್ರೆ ಯಶಸ್ವಿಗೊಳಿಸಿ  : ರಮೇಶ್ ಕಾಂಚನ್  – Vishwanews24

ಉಡುಪಿ: ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ , ಪ್ರಜಾಧ್ವನಿ ಯಾತ್ರೆ ಯಶಸ್ವಿಗೊಳಿಸಿ  : ರಮೇಶ್ ಕಾಂಚನ್

ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳು, ಮಿತಿಮೀರಿದ ಭ್ರಷ್ಟಾಚಾರ, ಪೊಲೀಸ್ ನೇಮಕಾತಿಯಲ್ಲಿ ಲಂಚದ ಬೇಡಿಕೆ, ಭೂ ಕಬಳಿಕೆ ಹಗರಣ, ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆಗಳಲ್ಲಿ ಅವ್ಯವಹಾರ, ಆಹಾರ ಕಿಟ್‌ನಲ್ಲಿ ಭ್ರಷ್ಟಾಚಾರ, ಮಕ್ಕಳಿಗೆ ಅಂಗನವಾಡಿಯಲ್ಲಿ ನೀಡುತ್ತಿರುವ ಮೊಟ್ಟೆಯಲ್ಲೂ ಹಗರಣ, ಇಂಧನ ಇಲಾಖೆಯಲ್ಲಿ ಭ್ರಷ್ಟಾಚಾರ, ಅಕ್ರಮವಾಗಿ ಶಾಸಕರನ್ನು ಖರೀದಿಸಿ ಜನಬೆಂಬಲವಿಲ್ಲದೆ ಸರ್ಕಾರ ರಚನೆ, ಕಾಂಟ್ಯಾಕ್ಟರ್‌ಗಳಿಂದ 40% ಲಂಚದ ಬೇಡಿಕೆ, ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ವಿಪರೀತ ಭ್ರಷ್ಟಾಚಾರ, ಇಂತಹ ಹತ್ತು ಹಲವು ವಿಷಯಗಳಿಂದ ಸಾರ್ವಜನಿಕರು ಸೋತು ಹೋಗಿದ್ದು ಬದಲಾವಣೆಯ ಗಾಳಿ ಬೀಸುತ್ತಿದ್ದು ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ.

ರಾಜ್ಯಾದ್ಯಂತ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಹಗರಣ, ಜನವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ “ಪ್ರಜಾಧ್ವನಿ ಯಾತ್ರೆ” ಈಗಾಗಲೇ ಪ್ರಾರಂಭವಾಗಿದ್ದು ತಾ. 22.01.2023ರ ಆದಿತ್ಯವಾರದಂದು ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳು, ವಿಪಕ್ಷ ನಾಯಕರು, ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಧೀಮಂತ ನಾಯಕರಾದ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಎಲ್ಲಾ ನಾಯಕರು ಬಸ್ ಯಾತ್ರೆಯ ಮೂಲಕ ಆಗಮಿಸುತ್ತಿದ್ದು ಈ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು, ಸಾರ್ವಜನಿಕರರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯ ಮೂಲಕ ವಿನಂತಿ ಮಾಡಿದ್ದಾರೆ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago