Featured

ಉಡುಪಿ: ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ: ಡಾ. ಆರತಿ ಕೃಷ್ಣ – Vishwanews24

ಉಡುಪಿ: ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ , ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ : ಡಾ. ಆರತಿ ಕೃಷ್ಣ

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು.

ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಗಳು ,ನಗರಸಭಾ ಸದ‌ಸ್ಥರು ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಮುಂದಾಳುಗಳಿಗಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅನಿವಾಸಿ ಭಾರತೀಯರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು. ಹಾಗೆಯೇ ರಾಜ್ಯದಲ್ಲಿ ಜನತೆಗೆ ನೀಡಿದ ಜನಪರ ಯೋಜನೆಗಳಿಂದ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಮತದಾರರ ಒಲವನ್ನು ಮತವಾಗಿ ಪರಿವರ್ತಿಸಲು ಪಕ್ಷದ ಚುನಾವಣಾ ಉಸ್ತುವಾರಿಗಳು ಬದ್ಧತೆಯಿಂದ ಶ್ರಮಿಸಬೇಕು ಎಂದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ‌.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಕೆ.ಪಿ.ಸಿ.ಸಿ ವೀಕ್ಷಕ ನವೀನ್ ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದಸ್ಯರು ಹಾಗೂ ಪಕ್ಷದ ವಿವಿಧ ಮುಂದಾಳುಗಳು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago