ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು.
ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಗಳು ,ನಗರಸಭಾ ಸದಸ್ಥರು ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಮುಂದಾಳುಗಳಿಗಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅನಿವಾಸಿ ಭಾರತೀಯರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು. ಹಾಗೆಯೇ ರಾಜ್ಯದಲ್ಲಿ ಜನತೆಗೆ ನೀಡಿದ ಜನಪರ ಯೋಜನೆಗಳಿಂದ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಮತದಾರರ ಒಲವನ್ನು ಮತವಾಗಿ ಪರಿವರ್ತಿಸಲು ಪಕ್ಷದ ಚುನಾವಣಾ ಉಸ್ತುವಾರಿಗಳು ಬದ್ಧತೆಯಿಂದ ಶ್ರಮಿಸಬೇಕು ಎಂದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಕೆ.ಪಿ.ಸಿ.ಸಿ ವೀಕ್ಷಕ ನವೀನ್ ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದಸ್ಯರು ಹಾಗೂ ಪಕ್ಷದ ವಿವಿಧ ಮುಂದಾಳುಗಳು ಭಾಗವಹಿಸಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…