Featured

ಉಡುಪಿ: ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ರಘುಪತಿ ಭಟ್ – vishwanews24

ಉಡುಪಿ: ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ರಘುಪತಿ ಭಟ್

ಉಡುಪಿ: ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್ ಅವರು‌ ಹೇಳಿದರು.

ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ ಮೇ. 30 ರ ಗುರುವಾರ ಮತದಾರರ ಸಭೆ ನಡೆಸಿ ಮತ ಯಾಚಿಸಿದರು.

ಶಾಸಕನಾಗಿದ್ದಾಗ ಎಲ್ಲಾ ವರ್ಗದ ಜನತೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೆ. ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಚಾರದಲ್ಲಿ ನನ್ನನ್ನು ಇಂದು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದಾಗ ಸುಶಿಕ್ಷಿತ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳಿದ ಅವರು ಇನ್ನೂ ಕೆಲಸ ಮಾಡುವ ತುಡಿತ ಇರುವ ನನಗೆ ಸೇವೆ ಮಾಡಲು ಹರಸಿ ಎಂದು ಪದವೀಧರರು, ವಕೀಲರು ಮತ್ತು ಶಿಕ್ಷಕರಲ್ಲಿ ಮನವಿ ಮಾಡಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

9 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago