ಉಡುಪಿ

ಉಡುಪಿ : ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳ ಇತ್ಯರ್ಥ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳ ಇತ್ಯರ್ಥ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ,: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣದಲ್ಲಿ ಸ್ಪಂದಿಸಿ, ಪರಿಹಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ನಿರ್ದೇಶನದಂತೆ ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ, ಎಲ್ಲಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಅಲಿಸಿ, ಅವುಗಳಿಗೆ ಸಂಬAಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಒದಗಿಸಲಾಗುತ್ತಿದ್ದು, ಸಾರ್ವಜನಿಕರೂ ಹಲವು ವರ್ಷಗಳಿಂದ ಬಾಕಿ ಇರುವ ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದು ಸೂಕ್ತ ಪರಿಹಾರ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಚ್ಚಟ್ಟು ಗ್ರಾಮದಲ್ಲಿ ಈ ಹಿಂದೆ ಎರಡು ಸರ್ಕಾರಿ ಬಸ್‌ಗಳನ್ನು ಓಡಿಸುತ್ತಿದ್ದು, ಹಲವು ದಿನಗಳಿಂದ ಈ ಸೇವೆ ಬಂದ್ ಆಗಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ಈ ಹಿಂದಿನoತೆ ಬಸ್‌ಗಳನ್ನು ಓಡಿಸುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಈ ಬಗ್ಗೆ ಕೂಡಲೇ ಪರಿಶೀಲಿಸಿ, ಸಾರ್ವಜನಿಕರಿಗೆ ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ತೊಂಬಟ್ಟು ಎಂಬಲ್ಲಿ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಕೂಡಲೇ ಇದನ್ನು ಪೂರ್ಣಗೊಳಿಸುವಂತೆ ಸಾರ್ವಜನಿಕರು ಕೋರಿದರು. ಸಂಬoಧಪಟ್ಟ ರಸ್ತೆ ನಿರ್ಮಾಣ ಮಾಡುತ್ತಿರುವ ಅನುಷ್ಠಾನ ಇಲಾಖೆಯ ಅಧಿಕಾರಿಗಳು ತಕ್ಷಣವೇ ಆ ಸ್ಥಳಕ್ಕೆ ತೆರಳಿ, ಅಲ್ಲಿನ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹಲವು ವರ್ಷಗಳಿಂದ ಕೋಟೇಶ್ವರದಲ್ಲಿ ವಾಸವಿದ್ದು, ತಮಗೆ ಚುನಾವಣಾ ಗುರುತು ಚೀಟಿ, ಆಧಾರ್ ಕಾರ್ಡ್ ಮತ್ತು ನಿವೇಶನ ಒದಗಿಸುವಂತೆ ಲಿಂಗತ್ವ ಅಲ್ಪ ಸಂಖ್ಯಾತರು ಮನವಿ ಸಲ್ಲಿಸಿದರು.

ಆರ್.ಟಿ.ಸಿ ಯಲ್ಲಿನ ಬದಲಾವಣೆ ಸೇರಿದಂತೆ 30 ಕ್ಕೂ ಅಧಿಕ ಅರ್ಜಿಗಳ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಸಮಸ್ಯೆಗಳಿಗೆ ವಿಳಂಬಕ್ಕೆ ಅವಕಾಶ ನೀಡದೇ ತ್ವರಿತಗತಿಯಲ್ಲಿ ಬಗೆಹರಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ 94 ಸಿ ಹಕ್ಕು ಪತ್ರ ವಿತರಣೆ, ಅಂಗವಿಕಲರ ಪೋಷಣಾ ಭತ್ಯೆ, ಎಂಡೋಸಲ್ಫಾನ್ ಪೀಡಿತರಿಗೆ ನೆರವು, ಅಕ್ರಮ-ಸಕ್ರಮ ಸಾಗುವಳಿ ಚೀಟಿ, ಇಂದಿರಾ ಗಾಂಧೀ ರಾಷ್ಟ್ರೀಯ ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷೆ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವತಿಯಿಂದ, ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ವಿತರಿಸಲಾಯಿತು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಹಾಲಾಡಿ ಗ್ರಾ.ಪಂ.ಅಧ್ಯಕ್ಷೆ ಸಾಧು, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಕಿರಣ್ ಗೌರಯ್ಯ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ರಾಘವೇಂದ್ರ ವಂದಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago