ಉಡುಪಿ

ಉಡುಪಿ :ಜನರ ಸಮಸ್ಯೆಗಳ ದೂರುಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು: ಯಶ್‌ಪಾಲ್ ಎ ಸುವರ್ಣ – Vishwanews24

ಉಡುಪಿ :ಜನರ ಸಮಸ್ಯೆಗಳ ದೂರುಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು: ಯಶ್‌ಪಾಲ್ ಎ ಸುವರ್ಣ

ಉಡುಪಿ, : ಸರಕಾರ ಜಾರಿಗೆ ತಂದಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಮಸ್ಯೆಯನ್ನು ಹೊತ್ತುತಂದ ಜನಸಾಮಾನ್ಯರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಶಾಸಕ ಯಶ್‌ಪಾಲ್ ಎ
ಸುವರ್ಣ ತಿಳಿಸಿದರು. ಬ್ರಹ್ಮಾವರದ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿರುವ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ ನಡೆದ ಬ್ರಹ್ಮಾವರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜನ ಸಾಮಾನ್ಯರು ತಮ್ಮ ಸಮಸ್ಯೆಗಳು ಬಗೆಹರಿಯುತ್ತವೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡು ಜನಸ್ಪಂದನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಂತಹ ಸಂದರ್ಭದಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿ, ಸಮಸ್ಯೆಗಳನ್ನು ಬಗೆಹರಿಸಲು ಮುಂದಾದಲ್ಲಿ ಮಾತ್ರ ಈ ಕಾರ್ಯಕ್ರಮ ಒಂದು ಅರ್ಥಪೂರ್ಣ ಕಾರ್ಯಕ್ರಮವಾಗುತ್ತದೆ ಎಂದರು. ಕಂದಾಯ ಇಲಾಖೆಯಲ್ಲಿ ಹೆಚ್ಚಾಗಿ ಕಂಡುಬರುವ ಹಕ್ಕುಪತ್ರ ವಿತರಣೆಗೆ ಇರುವ ಗೊಂದಲಗಳನ್ನು ಬಗೆಹರಿಸಿ, ಶೀಘ್ರದಲ್ಲಿಯೇ ಅವುಗಳ ವಿತರಣೆಗೆ ಮುಂದಾಗಬೇಕು. ಮೆಸ್ಕಾಂ ಸೇರಿದಂತೆ ಇತರೆ ಇಲಾಖೆಯೊಂದಿಗೆ ಮುಂಬರುವ ಮಳೆಗಾಲಕ್ಕೂ ಮುಂಚೆಯೇ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದ ಅವರು, ಮಹಿಳೆಯರಿಗೆ ಗ್ಯಾರಂಟಿ ಯೋಜನೆಯಡಿ ಉಚಿತ ಬಸ್ ಸೌಲಭ್ಯ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವುದರೊಂದಿಗೆ ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಎಲ್ಲರಿಗೂ ದೊರಕುವಂತಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರ ದೈನಂದಿನ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಬೇಕೆಂಬ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟು ಆ ಮೂಲಕ ಅಧಿಕಾರಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಅರ್ಜಿಗಳು ಬಂದಲ್ಲಿ ಅವುಗಳನ್ನು ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

8 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago