ಉಡುಪಿ: ಜನಸಾಮಾನ್ಯರೊಂದಿಗೆ ಸ್ಥಳೀಯ ಕನ್ನಡ ಭಾಷೆಯಲ್ಲಿ ವ್ಯವಹರಿಸಿ : ಬ್ಯಾಂಕ್ ಮ್ಯಾನೇಜರ್ ಗಳಿಗೆ ಜಿ.ಪಂ ಸಿ.ಇ.ಓ ಸೂಚನೆ – vishwanews24
ಉಡುಪಿ: ಜನಸಾಮಾನ್ಯರೊಂದಿಗೆ ಸ್ಥಳೀಯ ಕನ್ನಡ ಭಾಷೆಯಲ್ಲಿ ವ್ಯವಹರಿಸಿ : ಬ್ಯಾಂಕ್ ಮ್ಯಾನೇಜರ್ ಗಳಿಗೆ ಜಿ.ಪಂ ಸಿ.ಇ.ಓ ಸೂಚನೆ
ಉಡುಪಿ: ಬ್ಯಾಂಕ್‌ಗಳ ಮ್ಯಾನೆಜರ್‌ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ರಾಷ್ಟಿçÃಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು. ಗ್ರಾಹಕರೊಂದಿಗೆ ಸಂವಹನ ಮಾಡಲು ಅನುಕೂಲವಾಗುವಂತೆ ಸ್ಥಳೀಯ ವ್ಯಕ್ತಿಗಳನ್ನು ನೇಮಿಸುವಂತೆ ತಿಳಿಸಿದರು.
ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ : ಮಹಾಲಕ್ಷ್ಮಿ ಹಂತಕನ ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ರಿವೀಲ್ – vishwanews24
ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರನ್ನು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು ಎಂದರು.
ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಕಳೆದ ಸಾಲಿನಲ್ಲಿ 52,676 ಕೋಟಿ ರೂ. ವ್ಯವಹಾರ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿ 58,352 ಕೋಟಿ ರೂ ವ್ಯವಹಾರ ನಡೆದು, 5676 ಕೋಟಿ ರೂ. ಹೆಚ್ಚಾಗಿ ಶೇ.10.78 ರಷ್ಟು ಬೆಳೆವಣಿಗೆಯಾಗಿದೆ. ಆರ್ಥಿಕತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಲು ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಆದ್ಯತಾ ವಲಯಗಳಿಗೆ 2703.09 ಕೋಟಿ ರೂ., ಸಾಲ ವಿತರಣೆ ಮಾಡಿ ಶೇ. 30.74 ಹಾಗೂ ಆದ್ಯತೇತರ ವಲಯಗಳಿಗೆ 1677.82 ಕೋಟಿ ರೂ. ಸಾಲ ವಿತರಣೆ ಮಾಡಿ, ಶೇ. 43.65 ರಷ್ಟು ಸಾಧನೆ ಮಾಡಲಾಗಿದೆ ಎಂದರು.
ಅ.3ರಿಂದ 12ರವರೆಗೆ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024 :- vishwanews24
ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶೀಬ ಸಹಜನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿ0ಗ್ ಠೇವಣಿ ಅನುಪಾತವು ಶೇ.46.94 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.46.92 ರಷ್ಟು ಕಡಿಮೆಯಾಗಿ 0.02 ರಷ್ಟು ಹಿನ್ನಡೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾದ ವಿಷಯವಾಗಿದ್ದು, ಇದನ್ನು ಹೆಚ್ಚಿಸಲು ಮುಂದಿನ ದಿನಗಳಲ್ಲಿ ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ ನ ಎಕ್ಸಿಕ್ಯುಟಿವ್ ಇಳಾ ಸಾಹು, ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
