Featured

ಉಡುಪಿ: ಜನಸಾಮಾನ್ಯರೊಂದಿಗೆ ಸ್ಥಳೀಯ ಕನ್ನಡ ಭಾಷೆಯಲ್ಲಿ ವ್ಯವಹರಿಸಿ : ಬ್ಯಾಂಕ್ ಮ್ಯಾನೇಜರ್ ಗಳಿಗೆ ಜಿ.ಪಂ ಸಿ.ಇ.ಓ ಸೂಚನೆ – vishwanews24

ಉಡುಪಿ: ಜನಸಾಮಾನ್ಯರೊಂದಿಗೆ ಸ್ಥಳೀಯ ಕನ್ನಡ ಭಾಷೆಯಲ್ಲಿ ವ್ಯವಹರಿಸಿ : ಬ್ಯಾಂಕ್ ಮ್ಯಾನೇಜರ್ ಗಳಿಗೆ ಜಿ.ಪಂ ಸಿ.ಇ.ಓ ಸೂಚನೆ

ಉಡುಪಿ: ಬ್ಯಾಂಕ್‌ಗಳ ಮ್ಯಾನೆಜರ್‌ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಷ್ಟಿçÃಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು. ಗ್ರಾಹಕರೊಂದಿಗೆ ಸಂವಹನ ಮಾಡಲು ಅನುಕೂಲವಾಗುವಂತೆ ಸ್ಥಳೀಯ ವ್ಯಕ್ತಿಗಳನ್ನು ನೇಮಿಸುವಂತೆ ತಿಳಿಸಿದರು.

ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರನ್ನು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು ಎಂದರು.

ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಕಳೆದ ಸಾಲಿನಲ್ಲಿ 52,676 ಕೋಟಿ ರೂ. ವ್ಯವಹಾರ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿ 58,352 ಕೋಟಿ ರೂ ವ್ಯವಹಾರ ನಡೆದು, 5676 ಕೋಟಿ ರೂ. ಹೆಚ್ಚಾಗಿ ಶೇ.10.78 ರಷ್ಟು ಬೆಳೆವಣಿಗೆಯಾಗಿದೆ. ಆರ್ಥಿಕತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಲು ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಆದ್ಯತಾ ವಲಯಗಳಿಗೆ 2703.09 ಕೋಟಿ ರೂ., ಸಾಲ ವಿತರಣೆ ಮಾಡಿ ಶೇ. 30.74 ಹಾಗೂ ಆದ್ಯತೇತರ ವಲಯಗಳಿಗೆ 1677.82 ಕೋಟಿ ರೂ. ಸಾಲ ವಿತರಣೆ ಮಾಡಿ, ಶೇ. 43.65 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶೀಬ ಸಹಜನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿ0ಗ್ ಠೇವಣಿ ಅನುಪಾತವು ಶೇ.46.94 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.46.92 ರಷ್ಟು ಕಡಿಮೆಯಾಗಿ 0.02 ರಷ್ಟು ಹಿನ್ನಡೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾದ ವಿಷಯವಾಗಿದ್ದು, ಇದನ್ನು ಹೆಚ್ಚಿಸಲು ಮುಂದಿನ ದಿನಗಳಲ್ಲಿ ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ ನ ಎಕ್ಸಿಕ್ಯುಟಿವ್ ಇಳಾ ಸಾಹು, ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago