ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಅವರು ಇಂದು ಮಂಗಳವಾರ ಮಾ. 12 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಂಜೆ 4ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಅವರು ಸೇರ್ಪಡೆಗೊಳ್ಳುವ ನಿರ್ಧಾರವನ್ನು ಅಧಿಕೃತ ಹೇಳಿಕೆಯಲ್ಲಿ ಖಚಿತಪಡಿಸಿದ್ದಾರೆ.
ಜೆ.ಪಿ ಹೆಗ್ಡೆ ಅವರು ಈ ಹಿಂದೆ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಇವರು ಅನಂತರ ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು.
ಬಳಿಕ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋ ಗದ ಅಧ್ಯಕ್ಷರಾಗಿ ನೇಮಿಸಿತ್ತು. ಅವರು ಸಾಮಾಜಿಕ, ಶೈಕ್ಷಣಿಕಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದರು.ಆಯೋಗದ ಅಧ್ಯಕ್ಷ ಅವಧಿ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…