Featured

ಉಡುಪಿ  : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಉಡುಪಿ  : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಉಡುಪಿ : ಜಲಶಕ್ತಿ ಯೋಜನೆಯ ಮೂಲಕ ಮಳೆ ನೀರನ್ನು ಸಂಗ್ರಹಿಸಿ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟವನ್ನು ವೃಧ್ದಿಸಲು ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ನಡದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಗ್ರಾಮಗಳಲ್ಲಿರುವ ಕೆರೆಗಳ ಹೊಳೆತ್ತುವಿಕೆ , ಬಾವಿಗಳ ನಿರ್ಮಾಣ, ಕೊಳವೆ ಬಾವಿಗಳಿಗೆ ಜಲ ಮರುಪೂರಣ , ತೋಡುಗಳ ನಿರ್ಮಾಣ ಮಾಡುವ ಮೂಲಕ ಮಳೆ ನೀರನ್ನು ಸಂಗ್ರಹಿಸುವ ಮೂಲಕ ಅಂರ್ತಜಲವನ್ನು ವೃದ್ದಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ, ಮಹಾತ್ಮ ಗಾಂಧೀ ಉದ್ಯೋಗ ಖಾತರಿ ಯೋಜನೆಯಡಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅವಕಾಶವಿದ್ದು, ಇದರಿಂದ ಮಾನವ ದಿನಗಳ ಸೃಷ್ಠಿ ಸಹ ಸಾಧ್ಯವಾಗಲಿದೆ ಎಂದು ಎಲ್ಲಾ ಅಧಿಕಾರಿಗಳಿಗೆ ದಿನಕರ ಬಾಬು ಸೂಚನೆ ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ 65 ಕೆರೆಗಳ ಹೊಳು ತೆಗೆಯಲಾಗಿದೆ ಎಂದರು.

ಕೋವಿಡ್ ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ದಿಯಾಗಿ, ಸೋಂಕು ತಗುಲಿದರೆ ಅದರ ತೀವ್ರತೆ ಕಡಿಮೆಯಿರಲಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಿ, ಲಸಿಕೆ ಕೊರತೆಯಾದಂತೆ ಎಚ್ಚರವಹಿಸಿ , ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರಿಗೆ ಜಗೃತಿ ಮೂಡಿಸಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು

ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿಗೆ ಭಿತ್ತನೆ ಬೀಜ ಮತ್ತು ರಸಗೊಬ್ಬರದ ಸೂಕ್ತ ದಾಸ್ತಾನು ಹೊಂದಿರುವAತೆ ಸೂಚಿಸಿದ ದಿನಕರ ಬಾಬು, ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದರು. ಕಾರ್ಕಳ ತಾಲೂಕು ಸೂಡಾ ಗ್ರಾವiದ ಪಿಲಾರ್ ಖಾನ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶೋಭಾ ಜಿ ಪುತ್ರನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ , ಮುಖ್ಯ ಯೋಜನಾಧಿಕಾರಿ ಶ್ರ‍್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago