ಉಡುಪಿ : ಚರ್ಮ ಗಂಟು ರೋಗ (ಲುಂಪಿ) ಸೋಂಕಿಗೆ ದೇಶದ ವಿವಿಧ ಕಡೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜಾನುವಾರುಗಳು ಅಸುನೀಗಿವೆ. ಕರಾವಳಿಯಲ್ಲಿ ಇದುವರೆಗೆ ಯಾವುದೇ ಪ್ರಕರಣ ವರದಿ ಯಾಗಿಲ್ಲವಾದರೂ ಪಶು ಸಂಗೋಪನೆ ಇಲಾಖೆ ಮುಂಜಾಗ್ರತೆ ವಹಿಸಿದೆ.
ಉಡುಪಿ ಜಿಲ್ಲೆಯಲ್ಲಿ 2.58 ಲಕ್ಷ ಜಾನುವಾರುಗಳಿದ್ದು, ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ ಭಾಗದಲ್ಲಿ ಹೈನುಗಾರಿಕೆ ಹೆಚ್ಚಿದೆ. ಬೇರೆ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದು ಆತಂಕಕ್ಕೆ ಕಾರಣ ವಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿತ್ತಾದರೂ ಸಕಾಲಿಕ ಚಿಕಿತ್ಸೆಯಿಂದ ಜಾನುವಾರುಗಳು ಶೀಘ್ರ ಗುಣಮುಖವಾಗಿದ್ದವು.
ರೋಗ ಲಕ್ಷಣಗಳು
ರೋಗಗ್ರಸ್ಥ ಜಾನುವಾರುಗಳಿಂದ ನೊಣ, ಸೊಳ್ಳೆ, ಉಣ್ಣಿಗಳ ಮೂಲಕ ಆರೋಗ್ಯಕರ ಜಾನುವಾರುಗಳಿಗೆ ಸೋಂಕು ಹರಡುತ್ತದೆ. ಜ್ವರ, ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗುಳ್ಳೆಗಳು ಒಡೆದ ಜಾಗದಲ್ಲಿ ಗುಳಿಗಳು, ಗಂತಿಗಳು ಕಂಡುಬರುವುದು, ಹಲವು ದಿನಗಳ ವರೆಗೆ ವಾಸಿಯಾಗದ ಗಾಯಗಳು, ದೇಹದ ಹಲವು ಭಾಗಗಳಿಗೆ ಸೋಂಕು ವ್ಯಾಪಿಸಿ ದೇಹ ಕುಂದುವುದು, ಹಾಲಿನ ಉತ್ಪಾದನೆ ಕಡಿಮೆಯಾಗುವುದು ಪ್ರಮುಖ ಲಕ್ಷಣಗಳು. ಸೂಕ್ತ ಚಿಕಿತ್ಸೆ ದೊರೆತಲ್ಲಿ ಎರಡು ವಾರದೊಳಗೆ ರೋಗ ಹತೋಟಿಗೆ ಬರುತ್ತದೆ ಎನ್ನುತ್ತಾರೆ ತಜ್ಞ ಪಶು ವೈದ್ಯರು.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
2 ಸಾವಿರ ಲಸಿಕೆ ಲಭ್ಯ
ದ.ಕ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ದೃಢಪಟ್ಟಿಲ್ಲ. ಆದರೂ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 2 ಸಾವಿರ ಲಸಿಕೆಗಳನ್ನು ತರಿಸಿಕೊಂಡಿದ್ದೇವೆ.
– ಡಾ| ಅರುಣ್ ಕುಮಾರ್ ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ, ದ.ಕ. ಜಿಲ್ಲೆ
ಉಡುಪಿ – ದುರ್ಗಾ ದೌಡ್ : ಅ. 2ರಂದು ಕೃಷ್ಣನಗರಿಗೆ ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ – Vishwanews24
10 ಸಾವಿರ ಲಸಿಕೆಗೆ ಇಂಡೆಂಟ್
ಈ ವರ್ಷ ಎಲ್ಲಿಯೂ ಚರ್ಮ ಗಂಟು ರೋಗ ಪ್ರಕರಣ ಜಾನುವಾರುಗಳಲ್ಲಿ ದೃಢಪಟ್ಟಿಲ್ಲ. ನಮ್ಮ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಹೆಚ್ಚಿನ ಮುಂಜಾಗ್ರತೆ ತೆಗೆದುಕೊಂಡಿದ್ದೇವೆ. ರೋಗ ಲಕ್ಷಣ ಕಾಣಿಸಿದಲ್ಲಿ ತತ್‌ಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಿ. 10 ಸಾವಿರ ಲಸಿಕೆಗೆ ಈಗಾಗಲೆ ಇಂಡೆಂಟ್ ಹಾಕಿದ್ದೇವೆ. ಸೋಂಕು ಕಂಡುಬಂದರೆ ಒಂದೆರಡು ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲಾಗುತ್ತದೆ. ಬಾಧಿತ ಜಾನುವಾರುಗಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತದೆ.
– ಡಾ| ಶಂಕರ್ ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ, ಉಡುಪಿ ಜಿಲ್ಲೆ
– ಅವಿನ್ ಶೆಟ್ಟಿ
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…