Featured

ಉಡುಪಿ :  ಜಾನುವಾರುಗಳಿಗೆ “ಲುಂಪಿ’ ಚರ್ಮ ಸೋಂಕಿನ ಆತಂಕ : ಕರಾವಳಿಯಲ್ಲಿ ಮುನ್ನೆಚ್ಚರಿಕೆ ಲಸಿಕೆ ದಾಸ್ತಾನು – Vishwanews24

ಉಡುಪಿ :  ಜಾನುವಾರುಗಳಿಗೆ “ಲುಂಪಿ’ ಚರ್ಮ ಸೋಂಕಿನ ಆತಂಕ : ಕರಾವಳಿಯಲ್ಲಿ ಮುನ್ನೆಚ್ಚರಿಕೆ ಲಸಿಕೆ ದಾಸ್ತಾನು

ಉಡುಪಿ : ಚರ್ಮ ಗಂಟು ರೋಗ (ಲುಂಪಿ) ಸೋಂಕಿಗೆ ದೇಶದ ವಿವಿಧ ಕಡೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜಾನುವಾರುಗಳು ಅಸುನೀಗಿವೆ. ಕರಾವಳಿಯಲ್ಲಿ ಇದುವರೆಗೆ ಯಾವುದೇ ಪ್ರಕರಣ ವರದಿ ಯಾಗಿಲ್ಲವಾದರೂ ಪಶು ಸಂಗೋಪನೆ ಇಲಾಖೆ ಮುಂಜಾಗ್ರತೆ ವಹಿಸಿದೆ.

ಉಡುಪಿ ಜಿಲ್ಲೆಯಲ್ಲಿ 2.58 ಲಕ್ಷ ಜಾನುವಾರುಗಳಿದ್ದು, ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ ಭಾಗದಲ್ಲಿ ಹೈನುಗಾರಿಕೆ ಹೆಚ್ಚಿದೆ. ಬೇರೆ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದು ಆತಂಕಕ್ಕೆ ಕಾರಣ ವಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿತ್ತಾದರೂ ಸಕಾಲಿಕ ಚಿಕಿತ್ಸೆಯಿಂದ ಜಾನುವಾರುಗಳು ಶೀಘ್ರ ಗುಣಮುಖವಾಗಿದ್ದವು.

ರೋಗ ಲಕ್ಷಣಗಳು
ರೋಗಗ್ರಸ್ಥ ಜಾನುವಾರುಗಳಿಂದ ನೊಣ, ಸೊಳ್ಳೆ, ಉಣ್ಣಿಗಳ ಮೂಲಕ ಆರೋಗ್ಯಕರ ಜಾನುವಾರುಗಳಿಗೆ ಸೋಂಕು ಹರಡುತ್ತದೆ. ಜ್ವರ, ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗುಳ್ಳೆಗಳು ಒಡೆದ ಜಾಗದಲ್ಲಿ ಗುಳಿಗಳು, ಗಂತಿಗಳು ಕಂಡುಬರುವುದು, ಹಲವು ದಿನಗಳ ವರೆಗೆ ವಾಸಿಯಾಗದ ಗಾಯಗಳು, ದೇಹದ ಹಲವು ಭಾಗಗಳಿಗೆ ಸೋಂಕು ವ್ಯಾಪಿಸಿ ದೇಹ ಕುಂದುವುದು, ಹಾಲಿನ ಉತ್ಪಾದನೆ ಕಡಿಮೆಯಾಗುವುದು ಪ್ರಮುಖ ಲಕ್ಷಣಗಳು. ಸೂಕ್ತ ಚಿಕಿತ್ಸೆ ದೊರೆತಲ್ಲಿ ಎರಡು ವಾರದೊಳಗೆ ರೋಗ ಹತೋಟಿಗೆ ಬರುತ್ತದೆ ಎನ್ನುತ್ತಾರೆ ತಜ್ಞ ಪಶು ವೈದ್ಯರು.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

2 ಸಾವಿರ ಲಸಿಕೆ ಲಭ್ಯ
ದ.ಕ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ದೃಢಪಟ್ಟಿಲ್ಲ. ಆದರೂ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 2 ಸಾವಿರ ಲಸಿಕೆಗಳನ್ನು ತರಿಸಿಕೊಂಡಿದ್ದೇವೆ.
– ಡಾ| ಅರುಣ್‌ ಕುಮಾರ್‌ ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ, ದ.ಕ. ಜಿಲ್ಲೆ

ಉಡುಪಿ – ದುರ್ಗಾ ದೌಡ್‌ : ಅ. 2ರಂದು ಕೃಷ್ಣನಗರಿಗೆ ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್‌ – Vishwanews24

10 ಸಾವಿರ ಲಸಿಕೆಗೆ ಇಂಡೆಂಟ್‌
ಈ ವರ್ಷ ಎಲ್ಲಿಯೂ ಚರ್ಮ ಗಂಟು ರೋಗ ಪ್ರಕರಣ ಜಾನುವಾರುಗಳಲ್ಲಿ ದೃಢಪಟ್ಟಿಲ್ಲ. ನಮ್ಮ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಹೆಚ್ಚಿನ ಮುಂಜಾಗ್ರತೆ ತೆಗೆದುಕೊಂಡಿದ್ದೇವೆ. ರೋಗ ಲಕ್ಷಣ ಕಾಣಿಸಿದಲ್ಲಿ ತತ್‌ಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಿ. 10 ಸಾವಿರ ಲಸಿಕೆಗೆ ಈಗಾಗಲೆ ಇಂಡೆಂಟ್‌ ಹಾಕಿದ್ದೇವೆ. ಸೋಂಕು ಕಂಡುಬಂದರೆ ಒಂದೆರಡು ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲಾಗುತ್ತದೆ. ಬಾಧಿತ ಜಾನುವಾರುಗಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತದೆ.
– ಡಾ| ಶಂಕರ್‌ ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ, ಉಡುಪಿ ಜಿಲ್ಲೆ

– ಅವಿನ್‌ ಶೆಟ್ಟಿ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago