Featured

ಉಡುಪಿ : ಜಿಲ್ಲಾಡಳಿತಕ್ಕೆ ಇನ್ಫೋಸಿಸ್ ನಿಂದ 70 ಲಕ್ಷ ರೂ ಮೌಲ್ಯದ ವೈದ್ಯಕೀಯ ಉಪಕರಣ ಹಸ್ತಾಂತರ -Vishwanews24

ಉಡುಪಿ : ಜಿಲ್ಲಾಡಳಿತಕ್ಕೆ ಇನ್ಫೋಸಿಸ್ ನಿಂದ 70 ಲಕ್ಷ ರೂ ಮೌಲ್ಯದ ವೈದ್ಯಕೀಯ ಉಪಕರಣ ಹಸ್ತಾಂತರ -Vishwanews24

ಉಡುಪಿ : ಇನ್ಫೋಸಿಸ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 70 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸ್ನ್‌ಟ್ರೇಟರ್ ಹಾಗೂ 10 ವೆಂಟಿಲೇಟರ್‌ಗಳನ್ನು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್ ವತಿಯಿಂದ ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಕೂಡಲೇ ಸ್ಪಂದಿಸಿ ಅಗತ್ಯವಿದ್ದ ಅರೋಗ್ಯ ಸಾಮಗ್ರಿಗಳನ್ನು ನೀಡಲಾಗಿದ್ದು, ಕೋವಿಡ್ 2 ನೇ ಅಲೆಯ ಈ ಸಮಯದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ, ಅಕ್ಸಿಜನ್ ಕಾನ್ಸನ್‌ಟ್ರೇಟರ್ ಮತ್ತು ವೆಂಟಿಲೇಟರ್‌ಗಳನ್ನು ನೀಡಿದ್ದು, ಸಂಸ್ಥೆಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಪ್ರಸ್ತುತ ನೀಡಿರುವ ಉಪಕರಣಗಳಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ 5 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್‌ಟ್ರೇಟರ್, ಕುಂದಾಪುರ ತಾಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್‌ಟ್ರೇಟರ್, ಕಾರ್ಕಳ ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಇನ್ಫೋಸಿಸ್ ಮಂಗಳೂರು ವಿಭಾಗದ ಮ್ಯಾನೇಜರ್‌ಗಳಾದ ವಾಸುದೇವ ಕಾಮತ್ ಮತ್ತು ಸಂದೀಪ್ ಡಿಸಿಲ್ವಾ ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago