ಉಡುಪಿ: ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ಗಳನ್ನು ಆನ್‌ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೆ.ಲಿ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಆ್ಯನ್‌ಶೋರ್ ಕಂಪನಿ ವತಿಯಿಂದ ನೀಡಲಾದ ಈ ಎರಡು ಆಂಬುಲೆನ್ಸ್ಗಳನ್ನು ಉಡುಪಿ ಹಾಗೂ ಕಾಪು ತಾಲೂಕು ಆರೋಗ್ಯ ಕೇಂದ್ರಗಳಿಗೆ ನೀಡಲಾಗುವುದು ಎಂದರು. ಕಂಪೆನಿಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಆ್ಯನ್‌ಶೋರ್ ಕನ್ಸ್ಟ್ರಕ್ಷನ್ ಕಂಪನಿಯ ಹರೀಶ್ ಶೆಟ್ಟಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…