Featured

ಉಡುಪಿ : ಜಿಲ್ಲಾಡಳಿತಕ್ಕೆ 27 ಲಕ್ಷ ರೂ. ಮೌಲ್ಯದ ಆಂಬುಲೆನ್ಸ್ ಗಳ ಹಸ್ತಾಂತರ -Vishwanews24

ಉಡುಪಿ : ಜಿಲ್ಲಾಡಳಿತಕ್ಕೆ 27 ಲಕ್ಷ ರೂ. ಮೌಲ್ಯದ ಆಂಬುಲೆನ್ಸ್ ಗಳ ಹಸ್ತಾಂತರ -Vishwanews24

ಉಡುಪಿ: ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ಗಳನ್ನು ಆನ್‌ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೆ.ಲಿ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.

ನಂತರ ಮಾತನಾಡಿದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಕೋವಿಡ್‌ನ ಈ ಸಂಕಷ್ಟವು ಆದಷ್ಟು ಬೇಗ ಮುಕ್ತಾಯವಾಗಿ, ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಾಗಿರಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಆ್ಯನ್‌ಶೋರ್ ಕಂಪನಿ ವತಿಯಿಂದ ನೀಡಲಾದ ಈ ಎರಡು ಆಂಬುಲೆನ್ಸ್ಗಳನ್ನು ಉಡುಪಿ ಹಾಗೂ ಕಾಪು ತಾಲೂಕು ಆರೋಗ್ಯ ಕೇಂದ್ರಗಳಿಗೆ ನೀಡಲಾಗುವುದು ಎಂದರು. ಕಂಪೆನಿಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಆ್ಯನ್‌ಶೋರ್ ಕನ್ಸ್ಟ್ರಕ್ಷನ್ ಕಂಪನಿಯ ಹರೀಶ್ ಶೆಟ್ಟಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago