Featured

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಾಣ -Vishwanews24

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮತ್ತು ಕಚೇರಿಗೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ.

ಉಡುಪಿಯ ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಮಹಿಳಾ ನೌಕರರು ಹಾಗೂ ಕಚೇರಿಗೆ ಆಗಮಿಸುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಎಲ್ಲಾ ಅಗತ್ಯತೆಗಳನ್ನು ಪೂರೈಸಲಿದೆ. ಈ ಕೊಠಡಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಊಟ ಮಾಡಲು ಡೈನಿಂಗ್ ಟೇಬಲ್ ವ್ಯವಸ್ಥೆ, ವಿಶ್ರಾಂತಿ ಪಡೆಯಲು ಮಂಚ ಮತ್ತು ಬೆಡ್ ವ್ಯವಸ್ಥೆ ಇದೆ. ಅಲ್ಲದೇ ತಾಯಿಯರೊಂದಿಗೆ ಆಗಮಿಸುವ ಮಕ್ಕಳನ್ನು ಮಲಗಿಸಲು ಮರದ ತೊಟ್ಟಿಲು, ಉಡುಪು ಬದಲಾವಣಾ ಕೊಠಡಿ ಸೌಲಭ್ಯ ಸಹ ಇದೆ. ಶೌಚಾಲಯದಲ್ಲಿ ನ್ಯಾಪ್ಕಿನ್ ಬರ್ನಿಂಗ್ ವ್ಯವಸ್ಥೆ ಕೂಡಾ ಇದ್ದು, ಮುಂದಿನ ದಿನಗಳಲ್ಲಿ ನ್ಯಾಪ್ಕಿನ್ ವೆಂಡಿಂಗ್ ಮೆಷಿನ್ ಸಹ ಬರಲಿದ್ದು, ಈ ಮೆಷಿನ್‍ನಲ್ಲಿ ನಿಗಧಿತ ನಾಣ್ಯ ಪಾವತಿಸುವ ಮೂಲಕ ನ್ಯಾಪ್ಕಿನ್ ಪಡೆಯುವ ಸೌಲಭ್ಯ ದೊರೆಯಲಿದೆ.

ಹೆಚ್ಚಿನ ಸಂಖ್ಯೆಯ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯಿದ್ದು, ತಮ್ಮ ಮಾಸಿಕ ದಿನಗಳಲ್ಲಿ ಕೆಲಸ ಮಾಡಲು ಕಷ್ಟಪಡುವ ಮಹಿಳೆಯರು ಈ ವಿಶ್ರಾಂತಿ ಕೊಠಡಿಯಲ್ಲಿ ತುಸು ವಿಶ್ರಾಂತಿ ಪಡೆದು ಮತ್ತೆ ಕೆಲಸ ನಿರ್ವಹಿಸಬಹುದು. ಪ್ರಸೂತಿ ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ಮಹಿಳಾ ನೌಕರರು, ಅಗತ್ಯವಿದ್ದಲ್ಲಿ ಮನೆಯಿಂದ ಮಗುವನ್ನು ಕರೆಸಿ, ಹಾಲುಣಿಸಿ ಮತ್ತೆ ಮನೆಗೆ ಕಳುಹಿಸಬಹುದು. ಕರ್ತವ್ಯ ನಿರ್ವಹಣೆ ಸಮಯದಲ್ಲಿ ಮಹಿಳಾ ನೌಕರರು ಹೇಳಿಕೊಳ್ಳಲಾಗದ ಸಮಸ್ಯೆಗಳಿಗೆ ಈ ವಿಶ್ರಾಂತಿ ಕೊಠಡಿ ಪರಿಹಾರವಾಗಲಿದೆ.

ಮಹಿಳೆಯಾಗಿ ಮಹಿಳೆಯರ ಕಷ್ಟಗಳನ್ನು ಅರಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ವಿಶೇಷ ಮತುವರ್ಜಿ ವಹಿಸಿ ಈ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು,  ಮಹಿಳಾ ವಿಶ್ರಾಂತಿ ಕೊಠಡಿಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಮಂಗಳವಾರ ಉದ್ಘಾಟಿಸಿದರು.

 ಮಹಿಳಾ ನೌಕರರು ಮತ್ತು ಕಚೇರಿಗೆ ಬರುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಅಗತ್ಯಗಳನ್ನು ಪೂರೈಸಲಿದೆ.
– ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ಗಮನ ಜಿಲ್ಲಾಧಿಕಾರಿ, ಉಡುಪಿ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago