Featured

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ – vishwanews24

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಶ್ರೀ ಹೊಸಮಾರಿಗುಡಿ  ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ..

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿ ಪ್ರಮುಖರು ಭಾಗಿ

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ..

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ದಿನಾಂಕ 03-02-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದೇವಸ್ಥಾನದ ಸುತ್ತ ಮುತ್ತಲಿನ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸ್ವಚ್ಛ ಮತ್ತು ಸುಂದರೀಕರಣಗೊಳಿಸುವ ಬಗ್ಗೆ ಮತ್ತು ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಉಪಾಧ್ಯಕ್ಷರಾದ ಕೆ. ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago