ಉಡುಪಿ: ಸದ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ ವರ್ಗಾಯಿಸಿದೆ. ಹಾಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ.
ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.
2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…