ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ ವರ್ಗಾವಣೆ ; ನೂತನ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್ ನೇಮಕ -Vishwanews24
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ವರ್ಗಾವಣೆಗೊಂಡಿದ್ದು, ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಶಿವಮೊಗ್ಗ ಜಿಲ್ಲೆ ಸೊರಬ ನಿವಾಸಿಯಾಗಿರುವ ಜಿ.ಜಗದೀಶ್ 13 ವರ್ಷ ಸೇವಾನುಭವ ಹೊಂದಿದ್ದಾರೆ. ಕೆಎಎಸ್ ಅಧಿಕಾರಿಯಾಗಿದ್ದು, 2012ರಲ್ಲಿ ಐಎಎಸ್ ಬಡ್ತಿ ಪಡೆದವರು. ಉಡುಪಿ ಜಿಲ್ಲೆಯಲ್ಲಿ 2006-07ರಲ್ಲಿ ಪ್ರೊಬೆಷನರಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಸವಣೂರು, ಶಿರಸಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಆಯುಕ್ತರಾಗಿ, ಹಾವೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ಸಿಟಿ ಕಾರ್ಪೊರೇಶನ್ ಕಮಿಷನರ್, ಹಾಸನ ಜಿ.ಪಂ ಸಿಇಒ, ಕೋಲಾರ ಜಿ.ಪಂ ಸಿಇಒ ಆಗಿದ್ದರು.
ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಜಾಗಕ್ಕೆ ಕೋಲಾರ ಜಿಲ್ಲಾ ಪಂಚಾಯತ್ ನ ಸಿಇಓ ಆಗಿದ್ದ ಜಿ. ಜಗದೀಶ್ ಅವರು ನೇಮಕವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಿಗೆ ಉತ್ತೇಜನ ನೀಡಿದ್ದರು.
