Featured

ಉಡುಪಿ: ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಅನಾಥಾಲಯ ಸ್ಥಾಪನೆ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ -Vishwanews24

ಉಡುಪಿ: ಜಿಲ್ಲೆಯ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದಲ್ಲಿ ಅನಾಥಾಲಯ ಆರಂಭಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಆಸ್ಪತ್ರೆಗೆ ಸಮಾಜಸೇವಕರು ಮತ್ತು ಸಾರ್ವಜನಿಕರು ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಇವರಿಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ತಿಳಿಸಿದರು. ಈ ಕುರಿತಂತೆ ಅನಾಥ ರೋಗಿಗಳ ಆರೈಕೆಗಾಗಿ ಜಿಲ್ಲೆಯಲ್ಲಿ ಅನಾಥಾಲಯ ಆರಂಭಿಸುವಂತೆ ಮತ್ತು ಜಿಲ್ಲಾಸ್ಪತ್ರೆಯಿಂದ ಸೂಚಿಸುವ ಅನಾಥರೋಗಿಗಳನ್ನು ಕಡ್ಡಾಯವಾಗಿ ದಾಖಲು ಮಾಡಿಕೊಳ್ಳುವಂತೆ ತಿಳಿಸಿದ ಮಹೇಶ್ವರ ರಾವ್, ಈ ಅನಾಥಾಲಯಕ್ಕೆ ಜಿಲ್ಲಾ ಖನಿಜ ನಿಧಿಯಿಂದ ಕೂಡ ಅಗತ್ಯ ಆರ್ಥಿಕ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಉಡುಪಿ ಜಿಲ್ಲಾಸ್ಪತ್ರೆ ಇದುವರೆಗೂ ತಾಲೂಕು ಆಸ್ಪತ್ರೆ ಮಾದರಿಯಲ್ಲಿಯೇ ಇದ್ದು, ಇದನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಕೋರಿದರು. ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ ಮಹೇಶ್ವರ ರಾವ್, ಪ್ರಸ್ತುತ ಆಸ್ಪತ್ರೆಯಲ್ಲಿ ದಾಖಲಾಗುತ್ತಿರುವ ಒಳರೋಗಿಗಳ ಸಂಖ್ಯೆ, ಚಿಕಿತ್ಸೆಗೆ ಆಗಮಿಸುತ್ತಿರುವ ಹೊರರೋಗಿಗಳ ಸಂಖ್ಯೆ ಕುರಿತಂತೆ ವಿವರಗಳನ್ನು ನೀಡುವಂತೆ ಜಿಲ್ಲಾ ಸರ್ಜನ್‍ಗೆ ಸೂಚಿಸಿದ ಅವರು, ಈ ಬಗ್ಗೆ ಸಂಬಂದಪಟ್ಟವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago