Featured

ಉಡುಪಿ, : ಜಿಲ್ಲಾಸ್ಪತ್ರೆಗೆ ಅತ್ಯಾಧುನಿಕ ಆಂಬುಲೆನ್ಸ್ ಹಸ್ತಾಂತರ -Vishwanews24

ಉಡುಪಿ, : ಜಿಲ್ಲಾಸ್ಪತ್ರೆಗೆ ಅತ್ಯಾಧುನಿಕ ಆಂಬುಲೆನ್ಸ್ ಹಸ್ತಾಂತರ -Vishwanews24

ಉಡುಪಿ, : ಎಂ.ಟಿ.ಆರ್ ಸಂಸ್ಥೆಯು ಸಿಎಸ್‌ಆರ್ ಚಟುವಟಿಕೆಯಡಿ ೫೦ ಲಕ್ಷ ರೂಗಳಲ್ಲಿ ಒಂದು ಹವಾನಿಯಂತ್ರಿತ ವೆಂಟಿಲೇಟರ್ ಸೌಲಭ್ಯವನ್ನು ಒಳಗೊಂಡ ಅತ್ಯಾಧುನಿಕ ಆ್ಯಂಬುಲೆನ್ಸ್ ಹಾಗೂ ೧೦ ಐಸಿಯು ಬೆಡ್‌ಗಳನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರ ಸಮ್ಮುಖದಲ್ಲಿ ಜಿಲ್ಲಾಸ್ಪತ್ರೆಗೆ, ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗೆ ಅನುಕೂಲವಾಗುವಂತೆ ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳು, ದಾನಿಗಳು ಸಹಕಾರ ನೀಡುತ್ತಿದ್ದು ಆ ನಿಟ್ಟಿನಲ್ಲಿ ಎಂಟಿಆರ್ ಫುಡ್ ಸಂಸ್ಥೆಯು ಪ್ರಸ್ತುತ ಅವಶ್ಯವಿರುವ ಮತ್ತು ಕೋವಿಡ್ ೩ನೇ ಅಲೆಯ ಮುಂಜಾಗ್ರತೆಯ ದೃಷ್ಟಿಯಿಂದ ೫೦ ಲಕ್ಷ ರೂಗಳಲ್ಲಿ ನೆರವು ನೀಡಿರುವುದು ಜಿಲ್ಲಾಭಿವೃದ್ಧಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ ಎಂದರು.

ಎಂಟಿಆರ್ ಸಂಸ್ಥೆಯ ಜನರಲ್ ಬ್ಯುಸಿನೆಸ್ ಮ್ಯಾನೇಜರ್ ಮೂರ್ತಿ ಆರ್ ಮಾತನಾಡಿ, ಎಂ.ಟಿ.ಆರ್ ಸಂಸ್ಥೆಯು ಸಾರ್ವಜನಿಕರ ಸೇವೆಯನ್ನು ಮಾಡುವುದು ಸಂಸ್ಥೆಯ ಮುಖ್ಯ ಗುರಿ ಹೊಂದಿದ್ದು, ಒಂದು ವರ್ಷದ ಗ್ಯಾರೆಂಟಿ ಮತ್ತು ವಾರೆಂಟಿ, ಉಚಿತ ಸರ್ವಿಸ್ ಇರುವ ಸುಸಜ್ಜಿತ ಆ್ಯಂಬುಲೆನ್ಸ್ ಹಾಗೂ ೧೦ ವೆಂಟಿಲೇಟರ್ ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ, ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಇದರ ಉಪಯೋಗ ಪಡೆದುಕೊಂಡಲ್ಲಿ ಸಂಸ್ಥೆಯ ಕೊಡುಗೆಗೆ ಮಹತ್ವ ಸಿಕ್ಕಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್, ಎಂ.ಟಿ.ಆರ್ ಸಂಸ್ಥೆಯ ಮುಖ್ಯಾಧಿಕಾರಿ ಪ್ರಕಾಶ್ ದೇಬಶೆಟ್ಟಿ, ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೇಜರ್ ಆಶಿಶ್ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

15 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

16 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

16 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

17 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

17 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

17 hours ago