ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ವಾರ್ಡಿನಲ್ಲಿ ಆತ್ಮಹತ್ಯೆ – Vishwanews24
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ವಾರ್ಡಿನಲ್ಲಿ ಆತ್ಮಹತ್ಯೆ – Vishwanews24
ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರು ವಾರ್ಡಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.28ರಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಮಂಗಳೂರು ಜೋಕಟ್ಟೆಯ ಮೈಂದಗುರಿ ನಿವಾಸಿ ಯೋಗೀಶ್ ಕೋಟ್ಯಾನ್(55) ಎಂದು ಗುರುತಿಸಲಾಗಿದೆ.
ಕ್ಷಯರೋಗಕ್ಕೆ ತುತ್ತಾಗಿದ್ದ ಇವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ವಿಪರೀತ ಕುಡಿತದ ಚಟದಿಂದ ಮನೆ ಬಿಟ್ಟು ತಿರುಗಾಡುತ್ತಿದ್ದರು ಎಂದು ತಿಳಿದುಬಂದಿದೆ
ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಟಿ.ಬಿ. ವಾರ್ಡಿನ ಬಾಗಿಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ . ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
