ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ – vishwanews24

Featured, ಉಡುಪಿ

ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ

ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.30 ರಂದು ಸಂಜೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹಿರಿಯಡ್ಕದ ಪೆರ್ಡೂರು ಪಾಡಿಗಾರ ನಿವಾಸಿ ಪ್ರದೀಪ್ ಪೂಜಾರಿ (28) ಎಂದು ತಿಳಿದು ಬಂದಿದೆ.

ಈತ ಯುವತಿಯ ಮಾನಭಂಗಕ್ಕೆ ಯತ್ನಿಸಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಎಂದು ತಿಳಿಯಲಾಗಿದೆ. ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಯ ಯುವಕರು ಹಾಗೂ ಬಿಲ್ಲವ ಮುಖಂಡರು ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ಘಟನೆಯ ವಿರುದ್ಧ ಪ್ತಕರಣ ದಾಖಲಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ : ಕೋಟ ಶ್ರೀನಿವಾಸ ಪೂಜಾರಿ – vishwanews24

Leave a Reply