ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವರಾದ ಯು. ಟಿ. ಖಾದರ್ ರವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲೆಯು ಜನತೆಯ ಬಹುಕಾಲದ ಕನಸಾದ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು ಡಿಸೆಂಬರ್ 2021ರಲ್ಲಿ ಪ್ರಾರಂಭಿಸಲಾಗಿದ್ದು, ಪ್ರಸ್ತುತ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮತ್ತು ಚಿಕಿತ್ಸೆಗಳನ್ನು ಒಳಗೊಂಡಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ 250 ಹಾಸಿಗೆಗಳ ಸೌಕರ್ಯಗಳನ್ನೊಳಗೊಂಡ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಶೀಘ್ರವಾಗಿ ಲೋಕಾರ್ಪಣೆ ಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರವು ನೂತನ ತಾಲೂಕಾಗಿ ರಚನೆಯಾಗಿ ಸುಮಾರು ಎಂಟು ವರ್ಷಗಳು ಕಳೆದಿದ್ದು, ತಾಲೂಕು ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ರಹ್ಮಾವರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದ್ದು, ತಾಲೂಕಿನ ತಾಲೂಕಿನ ಜನರಿಗೆ ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ, ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಹಾಗೂ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಬಿ. ಆರ್. ಶೆಟ್ಟಿ. ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಉದ್ದೇಶಕ್ಕೆ ಭೂಮಿಯ ಕೆಲಸ ಪ್ರಾರಂಭಿಸಿ ಕಟ್ಟಡದ ಪಾರ್ಕಿಂಗ್ ಉದ್ದೇಶಕ್ಕೆ ಸುಮಾರು 30 ಅಡಿಗಳಿಗೂ ಹೆಚ್ಚು ಅಗೆತ ಮಾಡಿರುವ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಮತ್ತು ಸರಕಾರಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸುವಂತೆ ಸಚಿವರಿಗೆ ತಿಳಿಸಿದರು.
ಶಾಸಕ ಯಶ್ ಪಾಲ್ ಸುವರ್ಣ ಅವರ ಮನವಿಗೆ ಸ್ಪಂದಿಸಿದ ಸಚಿವ ಯು. ಟಿ. ಖಾದರ್ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.
ಸುರತ್ಕಲ್: ಮುಕ್ಕ ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ ; ಪರಿಶೀಲನೆ ಸುರತ್ಕಲ್: ಆರೋಗ್ಯ…
ಉಡುಪಿ : ನೇರ ಸಂದರ್ಶನ ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ನವೆಂಬರ್ 13 ರಂದು…
ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ…
ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ ಉತ್ತರ ಪ್ರದೇಶ…
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…