ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಸಭೆಯು ಇಂದು ಪೂರ್ವಾಹ್ನ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾದ ಶ್ರೀ ಸಂಕಪ್ಪ ಎ. ಅವರು ಸರ್ವರನ್ನೂ ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ, ಹಿಂದುಳಿದ ವರ್ಗಗಳನ್ನು ಸಂಘಟಿಸಿ ಬಲಪಡಿಸುವ ಅಗತ್ಯ ಇದೆ. ಕಾಂಗ್ರೆಸ್ ಪಕ್ಷದಿಂದ ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮಟ್ಟದಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಏರ್ಪಾಡು ಮಾಡಲಾಗುವುದು. ಹಿಂದುಳಿದ ವರ್ಗದ ಕಾಂಗ್ರೆಸ್ ಕಾರ್ಯಕರ್ತರು ಸದಸ್ಯರನ್ನು ಸೇರ್ಪಡೆಗೊಳಿಸುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಸಮಿತಿಯ ಅಧ್ಯಕ್ಷರಾದ ಶ್ರೀ ಎಂ.ಡಿ. ಲಕ್ಷ್ಮೀನಾರಾಯಣ ರವರು ಮಾತನಾಡಿ ಪ್ರತಿಯೊಬ್ಬರಿಗೂ ಪ್ರತೀ ಜಾತಿಗೂ ಹಿಂದುಳಿದ ಸಮಿತಿಯಲ್ಲಿ ಪ್ರಾಧ್ಯಾನ್ಯತೆ ನೀಡಲಾಗಿದೆ. ಮೊದಲು ಜಾತಿ ಜನಾಂಗದ ಬಗ್ಗೆ ಮಾಹಿತಿ ಇರಲಿಲ್ಲ. ಮಾನ್ಯ ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲ್ಲಿ ವಿವರ ಪಡೆಯುವ ಸಮಿತಿ ರಚಿಸಿದ್ದರು. ಆದರೆ ಈಗಿನ ಸರಕಾರ ಈ ವರದಿ ಸ್ವೀಕಾರ ಮಾಡಿಲ್ಲ ನಮ್ಮ ವಿನಂತಿಗೂ ಬೆಲೆ ಕೊಡಲಿಲ್ಲ ಎಂದರು. ಜಿಲ್ಲಾ ಸಮಾವೇಶ ಮಾಡುವ ಬಗ್ಗೆ ಪ್ರತಿಕ್ರಿಯಿಸುತ್ತಾ ಜಿಲ್ಲಾ ಸಮಾವೇಶ ಮಾಡುವುದಾದರೆ ರಾಜ್ಯ ನಾಯಕರನ್ನು ತಾವೇ ಕರೆ ತರುವುದಾಗಿ ಆಶ್ವಾಸನೆಯಿತ್ತರು. ಅವರು ಮುಂದುವರಿಯುತ್ತಾ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ನಿಷ್ಕ್ರಿಯವಾಗಿದೆ. ಜನರಿಗೆ ಸರಕಾರದ ಮೇಲೆ ಭರವಸೆ ಕಡಿಮೆಯಾಗಿದೆ. ಚುನಾವಣೆ ನಡೆಸಲು ಬಿಜೆಪಿಗೆ ನಡುಕ ಹುಟ್ಟಿದೆ. ೨೫ ವಿಭಾಗಗಳು ಸೇರಿ ಬೂತ್ ಸಮಿತಿ ರಚನೆ ಆಗಬೇಕು. ನಾವು ಗೆಲ್ಲಲೇ ಬೇಕು ಅಲ್ಲಿಯ ತನಕ ವಿಶ್ರಮಿಸುವುದು ಬೇಡ ಎಂದರು. ಸದಸ್ಯತ್ವ ನೋಂದಣಿ ಅಭಿಯಾನವನ್ನು ಮಾಡಿ ಘಟಕಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಸಿ ಎರಡನೇ ಹಂತದ ಕಾರ್ಯಕರ್ತರಿಗೂ ಪ್ರಾಮುಖ್ಯತೆ ಸಿಗಬೇಕು ಎಂದರು.
ರಾಜ್ಯ ಹಿಂದುಳಿದ ವರ್ಗ ಘಟಕದ ಉಪಾಧ್ಯಕ್ಷರಾದ ತುಕರಾಂ ಶಾಸ್ತ್ರಿ, ಪ್ರಧಾನ ಕಾರ್ಯದರ್ಶಿ ಬಿ. ಎಲ್. ಹರೀಶ್, ದ.ಕ. ಜಿಲ್ಲಾ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗ ಘಟಕದ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿ, ಹಿಂದುಳಿದ ವರ್ಗ ಘಟಕದ ರಾಜ್ಯ ಕಾರ್ಯದರ್ಶಿ ಶಿವಾಜಿ ಸುವರ್ಣ ಧನ್ಯವಾದ ಸಲ್ಲಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಬ್ಲಾಕ್ ಅಧ್ಯಕ್ಷರುಗಳಾದ ದಿನಕರ್ ಹೇರೂರು, ರಮೇಶ್ ಕಾಂಚನ್, ಹಿಂದುಳಿದ ವರ್ಗ ಘಟಕದ ಪದಾಧಿಕಾರಿಗಳಾದ ಮಣಿಕಂಠ, ದಿನೇಶ್ ಬಂಗೇರ, ಮಂಜುನಾಥ ಪೂಜಾರಿ, ಶ್ರೀನಿವಾಸ ಶೆಟ್ಟಿಗಾರ್, ಮಹಾಬಲ ಮಡಿವಾಳ, ಎ.ಪಿ. ರಾಜು ಪೂಜಾರಿ, ಮೋಹನ್ ಪೂಜಾರಿ ಗಿಳಿಯಾರು, ಶ್ರೀಕುಮಾರ್, ಸುಲೋಚನಾ, ಅನುಷಾ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…