Featured

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ – vishwanews24

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ(ಅ.19) ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

ಉಡುಪಿ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್, ಕ್ರೀಡಾ ಸಂಚಾಲಕ ರಾಜು ಖಾರ್ವಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದ ಪಥ ಸಂಚಲನದಲ್ಲಿ ಭಾಗವಹಿಸುವ ಉಡುಪಿ, ಬ್ರಹ್ಮಾವರ, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ, ಕಾಪು ಹಾಗೂ ಮಣಿಪಾಲ ತಂಡಗಳಿಗೆ ಪ್ರತ್ಯೇಕ ಬಣ್ಣಗಳ ಜೆರ್ಸಿಯನ್ನು ವಿತರಿಸಲಾಗುತ್ತದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago