Featured

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ , ಹಾಗೂ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ ಆಯ್ಕೆ -Vishwanews24

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ , ಹಾಗೂ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ ಆಯ್ಕೆ -Vishwanews24

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021-23ನೆ ಸಾಲಿನ ನೂತನ ಅಧ್ಯಕ್ಷರಾಗಿ ನಮ್ಮ ಟಿವಿ ವಾಹಿನಿಯ ರಾಜೇಶ್ ಶೆಟ್ಟಿ ಅಲೆವೂರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ನಝೀರ್ ಪೊಲ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪಕ್ರಿಯೆ ನಡೆಸಲಾಯಿತು.

ಉಪಾಧ್ಯಕ್ಷರಾಗಿ ವಿನಯ ಪಾಯಸ್ ಕುಂದಾಪುರ, ಬಾಲಕೃಷ್ಣ ಪೂಜಾರಿ ಕಾಪು, ಆರ್ ಬಿ ಜಗದೀಶ್ ಕಾರ್ಕಳ, ಸಹಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ ಬ್ರಹ್ಮಾವರ, ಕೋಶಾಧಿಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಯ್ಬರ್ ಕಟ್ಟೆ, ಪ್ರಮೋದ್ ಸುವರ್ಣ, ಸಂತೋಶ್ ನಾಯ್ಕ್, ಉದಯ್ ಕುಮಾರ್ ತಲ್ಲೂರು, ಹರ್ಶಿಣಿ ಬ್ರಹ್ಮಾವರ, ಹರಿಪ್ರಸಾದ್ ನಂದಳಿಕೆ, ಸಂಜೀವ ಆರ್ಡಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿ ಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿವಾಕರ ಭಂಡಾರಿ ಲೆಕ್ಕಪತ್ರ ಮಂಡಿಸಿದರು. ರಾಕೇಶ್ ಕುಂಜೂರು ಕಾರ್ಯ ಕ್ರಮ ನಿರೂಪಿಸಿದರು

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago