ಉಡುಪಿ : ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿ : ಅರ್ಜಿ ಆಹ್ವಾನ -Vishwanews24

Featured, ಉಡುಪಿ

ಉಡುಪಿ : ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿ : ಅರ್ಜಿ ಆಹ್ವಾನ -Vishwanews24

ಉಡುಪಿ  (Vishwanews24): ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಸಮಾಜ ಮುಖಿಯಾಗಿ ಸೇವೆ ಸಲ್ಲಿಸಿದ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿ0ದ ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿ ಪುರಸ್ಕೃತರಿಗೆ 25000 ರೂ. ನಗದು ಬಹುಮಾನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಕಾರ್ಯದರ್ಶಿ, ಜಿಲ್ಲಾ ಧಾರ್ಮಿಕ ಪರಿಷತ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಅಧ್ಯಕ್ಷರು, ಜಿಲ್ಲಾ ಧಾರ್ಮಿಕ ಪರಿಷತ್ತು, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24