ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯವಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತೀವ್ರ ಆತಂಕ ಹಾಗೂ ಕಳವಳ ವ್ಯಕ್ತಪಡಿಸಿದ್ದಾರೆ.
ನ್ಯಾಯಾಲಯವು ನ್ಯಾಯದ ದೇವಾಲಯವಾಗಿದ್ದು, ಇಂತಹ ಬೆದರಿಕೆಗಳು ನ್ಯಾಯಾಂಗದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಪ್ರಯತ್ನಗಳಾಗಿವೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಬೆದರಿಕೆಯ ಹಿಂದಿರುವ ವ್ಯಕ್ತಿಗಳು ಅಥವಾ ಸಂಘಟನೆಗಳನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ, ತನ್ಮೂಲಕ ನ್ಯಾಯಾಲಯಗಳ ಕಲಾಪಗಳಿಗೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಇದರ ಜತೆಗೆ ನ್ಯಾಯಾಲಯಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…