ಉಡುಪಿ : ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ ಈ ಪ್ರಶಸ್ತಿ ಸಂದಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…