ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ ಸಿಹಿತಿಂಡಿ ನೀಡಿ ಜಾಗೃತಿ ಮೂಡಿಸಿದರು. ಈ ರೀತಿ ಜ.17ರವರೆಗೆ ಪೊಲೀಸರು ವಾಹನ ಚಾಲಕರಿಗೆ ಚಹಾ ಸಿಹಿತಿಂಡಿಗಳನ್ನು ನೀಡಿ ಅರಿವು ಮೂಡಿಸಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ರೋಟರಿ ಕ್ಲಬ್ ನ ಜೈವಿಠಲ್ ಉಪಸ್ಥಿತರಿದ್ದರು.
ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಸ್ವಾಗತಿಸಿದರು. ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ವಂದಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…