Featured

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24

ಬೈಂದೂರು,: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಶುಕ್ರವಾರ ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ ಮಾಡಿದ ಬೆದರಿಕೆ ಹಾಗೂ ಮಾನಸಿಕ ಹಿಂಸೆ ಆರೋಪಗಳು ಮತ್ತು ಅವುಗಳಿಗೆ ಸುಕುಮಾರ ಶೆಟ್ಟಿ ನೀಡಿದ ವಾಸ್ತವ ಅಂಶ ಆಧಾರಿತ ಸ್ಪಷ್ಟನೆಯ ಹಿನ್ನೆಲೆಯಲ್ಲಿ ಪಕ್ಷ ಕಾರ್ಯಕರ್ತರಲ್ಲಿ, ಮತದಾರರಲ್ಲಿ ಗೊಂದಲ ಏರ್ಪಟ್ಟಿದೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ತೊಡಗಿವೆ. ಈ ಕಾರಣದಿಂದ ಮತ್ತು ಸದಾನಂದ ಕುಟುಂಬದೆಡೆಗಿನ ಮಾನವೀಯ ಅನುಕಂಪದಿಂದ ಅವರ ವಿರುದ್ಧ ದಾಖಲಿಸಿರುವ ಚೆಕ್ ಬೌನ್ಸ್ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಶಾಸಕರು ನಿರ್ಧರಿಸಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‍ಕುಮಾರ ಶೆಟ್ಟಿ ತಿಳಿಸಿದರು.

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

ಭಾನುವಾರ ಇಲ್ಲಿನ ಪಕ್ಷ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಿಜೆಪಿ ಶಿಸ್ತಿನ ಪಕ್ಷ. ಅದರಲ್ಲಿ ಹಿರಿಯರು, ಕಿರಿಯರು ಒಂದು ಕುಟುಂಬದ ಸದಸ್ಯರಿದ್ದಂತೆ. ಒಂದು ಕೆಟ್ಟ ಘಳಿಗೆಯಲ್ಲಿ ಈ ಬೆಳವಣಿಗೆ ಆಗಿದೆ. ಇದನ್ನು ಮುಂದುವರಿಸಬಾರದೆಂದು ಪಕ್ಷದ ಜಿಲ್ಲಾ ವರಿಷ್ಠರೂ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.

ಪ್ರಕರಣ ಈಗ ಮುಗಿದ ಅಧ್ಯಾಯ. ಇದರ ಕುರಿತು ಮಂಡಲ ಪದಾಧಿಕಾರಿಗಳು ವರಿಷ್ಠರ ಅನುಮತಿ ಇಲ್ಲದೆ ಹೇಳಿಕೆಗಳನ್ನು ನೀಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದು ಸಲ್ಲದು. ಅಂತಹದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.ಬೈಂದೂರಿನಲ್ಲಿ ಬಿಜೆಪಿ ಬಲಿಷ್ಠವಾಗಿ ನೆಲೆಯೂರಿದೆ. ಅದಕ್ಕೆ ಪಕ್ಷನಿಷ್ಠ ಕಾರ್ಯಕರ್ತರ ಬಲ ಇದೆ. ಅದು ಮುಂದೆಯೂ ಒಗ್ಗಟ್ಟಿನಿಂದಿದ್ದು, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎನ್ನುವುದನ್ನು ವಿರೋಧಿಗಳು ಅರಿತುಕೊಳ್ಳಬೇಕು ಎಂದು ದೀಪಕ್‍ಕುಮಾರ ಶೆಟ್ಟಿ ಹೇಳಿದರು.ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಕಾರ್ಯದರ್ಶಿ ಪ್ರಕಾಶ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯ ಶಂಕರ ಪೂಜಾರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಮಾಲಿನಿ ಕೆ ಇದ್ದರು.

ಮಣಿ ಮಾಲಾ ಧರಿಸಿ , ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ – Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago