ಬೈಂದೂರು,: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಶುಕ್ರವಾರ ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ ಮಾಡಿದ ಬೆದರಿಕೆ ಹಾಗೂ ಮಾನಸಿಕ ಹಿಂಸೆ ಆರೋಪಗಳು ಮತ್ತು ಅವುಗಳಿಗೆ ಸುಕುಮಾರ ಶೆಟ್ಟಿ ನೀಡಿದ ವಾಸ್ತವ ಅಂಶ ಆಧಾರಿತ ಸ್ಪಷ್ಟನೆಯ ಹಿನ್ನೆಲೆಯಲ್ಲಿ ಪಕ್ಷ ಕಾರ್ಯಕರ್ತರಲ್ಲಿ, ಮತದಾರರಲ್ಲಿ ಗೊಂದಲ ಏರ್ಪಟ್ಟಿದೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ತೊಡಗಿವೆ. ಈ ಕಾರಣದಿಂದ ಮತ್ತು ಸದಾನಂದ ಕುಟುಂಬದೆಡೆಗಿನ ಮಾನವೀಯ ಅನುಕಂಪದಿಂದ ಅವರ ವಿರುದ್ಧ ದಾಖಲಿಸಿರುವ ಚೆಕ್ ಬೌನ್ಸ್ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಶಾಸಕರು ನಿರ್ಧರಿಸಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‍ಕುಮಾರ ಶೆಟ್ಟಿ ತಿಳಿಸಿದರು.
ಭಾನುವಾರ ಇಲ್ಲಿನ ಪಕ್ಷ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಿಜೆಪಿ ಶಿಸ್ತಿನ ಪಕ್ಷ. ಅದರಲ್ಲಿ ಹಿರಿಯರು, ಕಿರಿಯರು ಒಂದು ಕುಟುಂಬದ ಸದಸ್ಯರಿದ್ದಂತೆ. ಒಂದು ಕೆಟ್ಟ ಘಳಿಗೆಯಲ್ಲಿ ಈ ಬೆಳವಣಿಗೆ ಆಗಿದೆ. ಇದನ್ನು ಮುಂದುವರಿಸಬಾರದೆಂದು ಪಕ್ಷದ ಜಿಲ್ಲಾ ವರಿಷ್ಠರೂ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.
ಪ್ರಕರಣ ಈಗ ಮುಗಿದ ಅಧ್ಯಾಯ. ಇದರ ಕುರಿತು ಮಂಡಲ ಪದಾಧಿಕಾರಿಗಳು ವರಿಷ್ಠರ ಅನುಮತಿ ಇಲ್ಲದೆ ಹೇಳಿಕೆಗಳನ್ನು ನೀಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದು ಸಲ್ಲದು. ಅಂತಹದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.ಬೈಂದೂರಿನಲ್ಲಿ ಬಿಜೆಪಿ ಬಲಿಷ್ಠವಾಗಿ ನೆಲೆಯೂರಿದೆ. ಅದಕ್ಕೆ ಪಕ್ಷನಿಷ್ಠ ಕಾರ್ಯಕರ್ತರ ಬಲ ಇದೆ. ಅದು ಮುಂದೆಯೂ ಒಗ್ಗಟ್ಟಿನಿಂದಿದ್ದು, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎನ್ನುವುದನ್ನು ವಿರೋಧಿಗಳು ಅರಿತುಕೊಳ್ಳಬೇಕು ಎಂದು ದೀಪಕ್‍ಕುಮಾರ ಶೆಟ್ಟಿ ಹೇಳಿದರು.ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಕಾರ್ಯದರ್ಶಿ ಪ್ರಕಾಶ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯ ಶಂಕರ ಪೂಜಾರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಮಾಲಿನಿ ಕೆ ಇದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…