Featured

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಕರಾಳ ದಿನ ಆಚರಣೆ- Vishwanews24

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಕರಾಳ ದಿನ ಆಚರಣೆ

ಉಡುಪಿ: ಇಂದಿರಾಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯ 45 ನೇ ವರ್ಷ ಸಂಪೂರ್ಣವಾದ ಹಿನ್ನೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕರಾಳ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಬಿಜೆಪಿ ಜಿಲ್ಲಾ ಧ್ಯಕ್ಷ್ಯರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಸಿದ್ದರಾಮಯ್ಯನವರು ಈಗ ದೇಶದಲ್ಲಿ ತುರ್ತುಪರಿಸ್ಥಿತಿ ವಾತಾವರಣ ಇದೆ ಎಂದಿದ್ದಾರೆ ಆದರೆ‌‌ ಸಿದ್ದರಾಮಯ್ಯ ನವರು ಇದನ್ನು ಹೇಳುವುದು ಸರಿಯಲ್ಲ. ಅವರು ತುರ್ತು ಪರಿಸ್ಥಿತಿ ಸಂಧರ್ಭದಲ್ಲಿ ವಿರೋಧ ಪಕ್ಷದಲ್ಲಿ ಇದ್ದವರು. ಇವತ್ತು‌ ಕಾಂಗ್ರೆಸ್ ಬಾಲ ಹಿಡಿದುಕೊಂಡು ಹೋಗುತ್ತಾ ಇದ್ದಾರೆ. ಕೇವಲ ತನ್ನ ರಾಜಕೀಯ ಅಧಿಕಾರವನ್ನು ಉಳಿಸಿಕೊಳ್ಳಲು ಇಂದಿರಾಗಾಂಧಿ ಯವರು ತುರ್ತು ಪರಿಸ್ಥಿತಿ ಯನ್ನು ಘೊಷಣೆ ಮಾಡಿದ್ದರು. ಇವತ್ತು‌ ಕಾಂಗ್ರೆಸ್ ನವರಿಗೆ ಇಡಿ ನೋಟಿಸ್ ನೀಡಿದ ಕೂಡಲೇ ಧರಣಿ ಮಾಡುವ ಪರಿಸ್ಥಿತಿ ಬಂದಿದೆ. ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಯಾಯಿತು. ಇದರಿಂದಾಗಿ ದೇಶದ ವಿರೋಧ ಪಕ್ಷದ ನಾಯಕರ ಬಂದನ ಕೂಡಾ ಆಯಿತು ಎಂದರು.

ಇದೇ ಸಂಧರ್ಭದಲ್ಲಿ ತುರ್ತು ಪರಿಸ್ಥಿತಿಯ ವಿರುದ್ದ ಹೋರಾಡಿದ್ದ ಕಾರ್ಕಳದ ರಮಾಕಾಂತ ದೇವಾಡಿಗ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಮನೋಹರ್ ಕಲ್ಮಾಡಿ, ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕಾರ್ಯಕ್ರಮ ಸಂಯೋಜಕಿ ರೇಶ್ಮಾ ಯು ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

21 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago