ಮಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಡಲ ತೀರ ವಲಯ ನಿರ್ವಹಣಾ ಸಮಿತಿಯನ್ನು ಪುನರ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುವ ಈ 13 ಮಂದಿಯ ನೇತೃತ್ವದ ಸಮಿತಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಂಗಳೂರು ಮೂಲದ ಎ.ಕೆ. ಅನ್ಸಾಫ್ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಸಮಿತಿಗೆ ಉಡುಪಿ ಜಿಲ್ಲಾಧಿಕಾರಿ ಅವರು ಅಧ್ಯಕ್ಷರಾಗಿದ್ದು, ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಉಡುಪಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಉಡುಪಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನ ಅಧಿಕಾರಿ, ನಗರ ಸಭಾ ಆಯುಕ್ತರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು, ಉಡುಪಿಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣದ ಪರಿಸರ ಅಧಿಕಾರಿ, ಜಿಲ್ಲಾ ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕರು ಸೇರಿದಂತೆ ಒಟ್ಟು 13 ಮಂದಿ ಸದಸ್ಯರಿದ್ದು, ಅದರಲ್ಲಿ 9 ಮಂದಿ ಸರಕಾರಿ ಅಧಿಕಾರಿಗಳು ಹಾಗು 3 ಮಂದಿ ಅಧಿಕಾರೇತರ ಸದಸ್ಯರು ಸೇರಿದ್ದಾರೆ.
ಈ ಸಮಿತಿಯೂ ಉಡುಪಿ ಜಿಲ್ಲೆ ಸಿ ಆರ್ ಝಡ್ ವ್ಯಾಪ್ತಿಯ ಸಂರಕ್ಷಣೆಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…