Featured

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ 2020-21ನೆ ಸಾಲಿನ ಮಾನವರತ್ನ ಹಾಗೂ ಸೇವಾ ರತ್ನ ಪ್ರಶಸ್ತಿ -Vishwanews24

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ 2020-21ನೆ ಸಾಲಿನ ಮಾನವರತ್ನ ಹಾಗೂ ಸೇವಾ ರತ್ನ ಪ್ರಶಸ್ತಿ -Vishwanews24

2020-21ನೆ ಸಾಲಿನ ಮಾನವ ರತ್ನ ಪ್ರಶಸ್ತಿಗೆ ಹಿರಿಯ ಚಿಂತಕ ಜಿ. ರಾಜಶೇಖರ್ ಹಾಗೂ ಸೇವಾರತ್ನ ಪ್ರಶಸ್ತಿಗೆ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಇಸ್ಮಾಈಲ್ ತೋನ್ಸೆ ಆಯ್ಕೆ

ಉಡುಪಿ,: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಮಾನವೀಯ ಮೌಲ್ಯಗಳಿಗಾಗಿ ಹೋರಾಡುವ ಉಡುಪಿ ಜಿಲ್ಲೆಯ ವ್ಯಕ್ತಿಗೆ ‘ಮಾನವರತ್ನ’ ಹಾಗೂ ಸಮಾಜ ಸೇವಾರಂಗದಲ್ಲಿ ಅಪೂರ್ವ ಸಾಧನೆ ಮಾಡಿದವರಿಗೆ ‘ಸೇವಾ ರತ್ನ’ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಅದರಂತೆ 2020-21ನೆ ಸಾಲಿನ ಮಾನವ ರತ್ನ ಪ್ರಶಸ್ತಿಗೆ ಹಿರಿಯ ಚಿಂತಕ ಜಿ. ರಾಜಶೇಖರ್ ಹಾಗೂ ಸೇವಾರತ್ನ ಪ್ರಶಸ್ತಿಗೆ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಇಸ್ಮಾಈಲ್ ತೋನ್ಸೆ ಆಯ್ಕೆಯಾಗಿದ್ದಾರೆ.

ಮುಹಮ್ಮದ್ ಇಸ್ಮಾಈಲ್ – ರಾಜಶೇಖರ್

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಈ ವಿಷಯ ಪ್ರಕಟಿಸಿದರು. ಈ ಎರಡೂ ಪ್ರಶಸ್ತಿಯು ಪ್ರಶಸ್ತಿ ಮತ್ತು ತಲಾ 25000 ರೂ. ನಗದು ಒಳಗೊಂಡಿದೆ. ಜ.9ರಂದು ಸಂಜೆ 6.15ಕ್ಕೆ ಉಡುಪಿ ಅಂಬಾಗಿಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿರುವ ವಿವಿಧ ಸಮುದಾಯಗಳ ಸ್ನೇಹ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಸಮಾವೇಶದಲ್ಲಿ ಜಿಲ್ಲೆಯ 9 ಮಂದಿ ಹಿರಿಯ ಸಾಧಕರುಗಳಾದ ಕ್ರೈಸ್ತ ಧರ್ಮ ಗುರು, ಸಾಮಾಜಿಕ ಹೋರಾಟಗಾರ ಫಾ.ವಿಲಿಯಮ್ ಮಾರ್ಟಿಸ್, ಜನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಮಲ್ಪೆಯ ಮತ್ಸೋದ್ಯಮಿ ಸಾಧು ಸಾಲಿಯಾನ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಠ್ಠಲ್‌ದಾಸ್ ಬನ್ನಂಜೆ, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಥಮ ಅಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಉಡುಪಿ ಆಶಾನಿಲಯ ವಿಶೇಷ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ಶಶಿಕಲಾ ಬೆಂಜಮಿನ್ ಕೋಟ್ಯಾನ್, ಕಾರ್ಕಳದ ಸಮಾಜ ಸೇವಕಿ ಆಯಿಶಾ ಕಾರ್ಕಳ, ಕೋಡಿ-ಕುಂದಾಪುರದ ಸಮಾಜ ಸೇವಕಿ ಲಕ್ಷ್ಮೀಬಾಯಿ ಪೂಜಾರಿ ಅವರನ್ನು ಸನ್ಮಾನಿಸಲಾಗುವುದು.

ಸಮಾರಂಭವನ್ನು ಪದ್ಮಶ್ರೀ ಹರೇಕಳ ಹಾಜಬ್ಬ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ವಾರ್ತಾಭಾರತಿ ಕನ್ನಡ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ವಹಿಸಲಿರುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಚಂದ್ರ ಪೂಜಾರಿ ಮುಖ್ಯ ಭಾಷಣ ಮಾಡಲಿರುವರು. ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಪ್ರಸ್ತಾವನೆ ಹಾಗೂ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಜಿಪಂ ಅಧ್ಯಕ್ಷ ರಾಜು ಪೂಜಾರಿ ಬೈಂದೂರು, ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ ಶೆಣೈ ಭಾಗವಹಿಸಲಿದ್ದಾರೆ.

ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಹಾಜಿ ಅಬ್ದುಲ್ಲಾ ನಾವುಂದ, ಖಾಸಿಮ್ ಬಾರ್ಕೂರು, ಎಂ.ಪಿ.ಮೊದಿನಬ್ಬ ಹಾಗೂ ಅಶ್ಫಾಕ್ ಅಹ್ಮದ್ ಕಾರ್ಕಳ ಅತಿಥಿಗಳಾಗಿರುವರು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲಾ, ಕೋಶಾಧಿಕಾರಿ ಇಕ್ಬಾಲ್ ಎಸ್.ಕಟಪಾಡಿ, ಕಾರ್ಯಕ್ರಮದ ಸಂಚಾಲಕ ವಿ.ಎಸ್.ಉಮರ್, ಪತ್ರಿಕಾ ಕಾರ್ಯದರ್ಶಿ ಸಲಾಹುದ್ದೀನ್ ಅಬ್ದುಲ್ಲಾ, ಜಿಲ್ಲಾ ಸಮಿತಿ ಸದಸ್ಯ ಇದ್ರೀಸ್ ಹೂಡೆ ಉಪಸ್ಥಿತರಿದ್ದರು.

http://ಸುರತ್ಕಲ್: ಟೋಲ್ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗಾ ಥಳಿತ -Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

16 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

16 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago