ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24

Featured, ಉಡುಪಿ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ  -Vishwanews24

ಉಡುಪಿ: ಭಾರತೀಯ ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯ ಫಲಿತಾಂಶ ಗುರುವಾರವಾರ ಪ್ರಕಟವಾಗಿದ್ದು ದೀಪಕ್ ಕೋಟ್ಯಾನ್ ಇನ್ನಾ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಎಲ್ಲಾ ಬ್ಲಾ ಕ್ ಗಳಿಂದ ಒಟ್ಟು 2352 ಸದಸ್ಯರು ಐವೈಸಿ ಸೆಲ್ಫ್ ವೋಟಿಂಗ್ ಅ್ಯಪ್ ಮೂಲಕ ಮತದಾನದಲ್ಲಿ ಪಾಲ್ಗೊಂಡು ಮತ ಚಲಾವಣೆ ಮಾಡಿದ್ದು, ದೀಪಕ್ ಕೋಟ್ಯಾನ್ 1186 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿಯಾಗಿದ್ದ ಹಿಂದಿನ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಅವರು 698 ಮತಗಳನ್ನು ಪಡೆದಿರುತ್ತಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಿಂದಿನ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಮತ್ತು ಯುವ ನಾಯಕ ದೀಪಕ್ ಕೋಟ್ಯಾನ್ ನಡುವೆ ತೀವ್ರ ಪೈಪೋಟಿ ಕೂಡ ಏರ್ಪಟ್ಟಿತ್ತು.

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24