Featured

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆ – vishwanews24

ಉಡುಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆ

ಕೋಟ: ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಹಲವಾರು ಯಶಸ್ವಿ ವಿದ್ಯಾರ್ಥಿ ಹೋರಾಟಗಳನ್ನು ಸಂಘಟಿಸಿ, ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅನಂತರ ರಾಜಕೀಯ ಪ್ರವೇಶಿಸಿ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

‘ಗೋವಿಗಾಗಿ ಮೇವು’ ಎನ್ನುವ ಯಶಸ್ವಿ ಅಭಿಯಾನವನ್ನು ಸಂಘಟಿಸಿ, ಗೋ ಶಾಲೆಗಳಿಗೆ ವಿವಿಧ ಸಂಘಟನೆಗಳಿಂದ ಮೇವು ಒದಗಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಕರಾವಳಿ ರೈಲ್ವೇ ಹೋರಾಟ ಸಮಿತಿಯ ಪ್ರಮುಖರಾಗಿ, ಬಿಲ್ಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago