Featured

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಶ್ರೀ ಸುನಿಲ್ ಕುಮಾರ್ ಸೂಚನೆ – Vishwanews24

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಶ್ರೀ ಸುನಿಲ್ ಕುಮಾರ್ ಸೂಚನೆ

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಸುನಿಲ್ ಕುಮಾರ್ ಇವರಿಂದ ಅಧಿಕಾರಿಗಳಿಗೆ ಸೂಚನೆ.

ಇಂದು ಮಾರ್ಚ್ 30ರಂದು ಬೆಂಗಳೂರು ವಿಧಾನ ಸೌಧದಲ್ಲಿ ಉಡುಪಿ ಶಾಸಕರಾದ ಶ್ರೀ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಭಾಜಪದ ಅಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು ಇವರುಗಳೊಂದಿಗೆ ರಂಗಭೂಮಿ (ರಿ.) ಉಡುಪಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಸೇರಿದಂತೆ ತಂಡವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಸುನಿಲ್ ಕುಮಾರ್ ಇವರನ್ನು ಭೇಟಿಯಾಗಿ ಉಡುಪಿ ಜಿಲ್ಲಾ ರಂಗಮಂದಿರದ ನಿರ್ಮಾಣದ ತುರ್ತು ಅಗತ್ಯತೆಯನ್ನು ತಿಳಿಸಿದಾಗ, ಮಾನ್ಯ ಸಚಿವರು ಈ ಕೂಡಲೇ, ಆರಂಭಿಕವಾಗಿ ರೂ ಎರಡು ಕೋಟಿ ಅನುದಾನಗಳನ್ನು ಇಲಾಖೆಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಸುಮಾರು 12 ವರ್ಷದ ಹಿಂದೆಯೇ ಸರ್ಕಾರದಿಂದ ಬಿಡುಗಡೆ ಆಗಿ ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇರುವ ರೂ 50 ಲಕ್ಷ ಅನುದಾನದೊಂದಿಗೆ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಉಡುಪಿ ಜಿಲ್ಲೆಯ ಸಮಸ್ತ ಕಲಾವಿದರ, ಕಲಾಪ್ರೇಮಿಗಳ ಕನಸು ನನಸಾಗುವತ್ತ ಸದ್ಯದಲ್ಲೇ ಸಾಗಲಿದೆ ಎಂಬ ಸಂಭ್ರಮದ ವಿಚಾರವನ್ನು ತಮಗೆಲ್ಲರಿಗೂ ತಿಳಿಸಲು ಬಹಳ ಸಂತೋಷ ಪಡುತ್ತಿದ್ದೇನೆ.ಜಿಲ್ಲಾ ರಂಗಮಂದಿರ ಬೇಡಿಕೆಗೆ ಧ್ವನಿಗೂಡಿಸಿದ ಉಡುಪಿ ಶಾಸಕರಾದಿ ಎಲ್ಲಾ ನಾಯಕರುಗಳಿಗೆ ಮಗದೊಮ್ಮೆ ಧನ್ಯವಾದ. ಸಚಿವರ ಆದೇಶವನ್ನ ಮೂರ್ತರೂಪಕ್ಕೆ ತರುವಲ್ಲಿ ಅಧಿಕಾರಿಗಳು ತುರ್ತಾಗಿ ಶೃಮಿಸಲಿ ಎಂದು ಆಶಿಸುತ್ತೇನೆ.

– ಪ್ರದೀಪ್ ಚಂದ್ರ ಕುತ್ಪಾಡಿ
ಪ್ರಧಾನ ಕಾರ್ಯದರ್ಶಿ
ರಂಗಭೂಮಿ (ರಿ.) ಉಡುಪಿ

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago