Featured

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯುವುದು ಕಡ್ಡಾಯ : ಜಿಲ್ಲಾದಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾದಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾಗ್ರಾಮ ಪಂಚಾಯತ್ ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ತಪ್ಪಿದಲ್ಲಿಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾನ್ಯವಾಗಿ ಯಾವುದೇ ಪ್ರಚಾರ ಫಲಕಗಳು ಭಿತ್ತಿಪತ್ರಗಳು ಕರಪತ್ರಗಳು ಧ್ವನಿವರ್ಧಕಗಳ ಬಳಕೆ ಸೇರಿದಂತೆ ಮತ್ತಿತರ ಪ್ರಚಾರ ಕೈಗೊಳ್ಳುವ ಮುನ್ನನಿಗಧಿತ ಪ್ರಾಧಿಕಾರದಿಂದ ಕಾನೂನುನಡಿಯಲ್ಲಿಅವಶ್ಯವಿರುವ ಅನುಮತಿ ಪತ್ರವನ್ನು ಪಡೆದು ಕಾರ್ಯಗತಗೊಳಿಸಬೇಕು. ಒಂದೊಮ್ಮೆ ಉಲ್ಲಂಘಿಸಿ ನಡೆದುಕೊಂಡಲ್ಲಿಅಂತಹವರ ವಿರುದ್ದ ಕಾನೂನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯಾವುದೇ ರೀತಿಯ ಪ್ರಚಾರ ಫಲಕಗಳು ಸೇರಿದಂತೆ ಮತ್ತಿತರ ಪ್ರಚಾರ ಸಾಮಗ್ರಿಗಳನ್ನು ಅನುಮತಿ ಪಡೆದು ಬಳಸಿದ್ದಲ್ಲಿ, ಅನುಮತಿಯ ಕಾಲಾವಧಿ ಮುಗಿದ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದ ಅವರು ಯಾವುದೇ ಸಭೆ ಸಮಾರಂಭ ಮೆರವಣಿಗೆ ನಡೆಸಲು ಅನುಮತಿ ತೆಗೆದುಕೊಳ್ಳುವುದು ಕಡ್ಡಾಯ ಎಂದರು.

ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ನೊಂದಾವಣಿ ಆಗಿದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು , ಹೆಸರು ಬಿಟ್ಟು ಹೋದಲ್ಲಿ ಕೂಡಲೇ ಹೆಸರು ನೊಂದಾಯಿಸಿಕೊಳ್ಳಬೇಕು, ಮುಂದಿನ ವಾರದಲ್ಲಿ ಬಿ.ಎಲ್.ಓ ಗಳು ಹಾಗೂ ಚುನಾವಣಾ ಏಜೆಂಟರುಗಳ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಯಾವುದೇ ರೀತಿ ಗೊಂದಲಗಳಿದ್ದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಪ್ರತಿ ಮತದಾನದ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿ ಒಂದೊಮ್ಮೆ ಯಾವುದೇ ಸೌಕರ್ಯಗಳ ಕೊರತೆಯಿದ್ದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದ ಅವರು ಈ ಬಾರಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರು ಮತ್ತು ವಿಶೇಷ ಚೇತನರಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ,ಅಪರಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣಾ ಅಧಿಕಾರಿಗಳು ಹಾಗೂ ವಿವಿಧರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

2 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

4 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago