ಉಡುಪಿ: ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಮಾರ್ಚ್ ಕೊನೆಯಲ್ಲಿ ಉಡುಪಿಯಲ್ಲಿ ನಡೆಯಲಿರುವ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರ ಮಥುರಾ ಕಂಪರ್ಟ್ಸ್ ಸಭಾಂಗಣದಲ್ಲಿ ನಡೆಯಿತು. ಶ್ರೀರಾಮಸೇನೆಯ ರಾಜ್ಯ ಪ್ರ ಕಾರ್ಯದರ್ಶಿ ಆನಂದ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಾಧ್ಯಕ್ಷರಾದ ಗಂಗಾಧರ್ ಕುಲಕರ್ಣಿ ವಿವರವನ್ನು ನೀಡಿದರು.
ದೇಶ ಮೊದಲು ಎಂಬ ಸಂಘಟನೆಯ ದ್ಯೇಯದಂತೆ ನಡೆಯುವ ಈ ಕಾರ್ಯಕ್ರಮದ ರೂಪು ರೇಷೆಯ ಬಗ್ಗೆ ಚರ್ಚಿಸಿ ಸಾಧು ಸಂತರು, ಮೋದಿ ಅಭಿಮಾನಿಗಳು, ವಿವಿಧ ಸಂಘಟನೆ, ಹಾಗೂ ಜನಪ್ರತಿನಿದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗುವುದೆಂದು ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ತಿಳಿಸಿದರು.
ಈ ಸಂಧರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿಯವರನ್ನು ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಗೌರವಿಸಲಾಯಿತು. ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ ಈ ಕಾರ್ಯಕ್ರಮವನ್ನು ಜಿಲ್ಲಾ ಪ್ರ ಕಾರ್ಯದರ್ಶಿ ಸುಧರ್ಶನ್ ಪೂಜಾರಿ ನಿರೂಪಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…