ಉಡುಪಿ : ಪ್ರವಾಹ ಪರಿಹಾರ ನಿಧಿಯಾಗಿ ಉಡುಪಿ ಜಿಲ್ಲೆಗೆ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ (ಸಿಎಂ) ಬಿ ಎಸ್ ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಜಿಲ್ಲೆಯ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, , ಲಾಲಾಜಿ ಆರ್ ಮೆಂಡನ್, ವಿ ಸುನಿಲ್ ಕುಮಾರ್ ಹಾಗೂ ಬಿ ಎಂ ಸುಕುಮಾರ್ ಶೆಟ್ಟಿ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ನೈಸರ್ಗಿಕ ವಿಕೋಪಕ್ಕೆ ಒಳಗಾದ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಇಲಾಖಾ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್ ಅವರಿಗೆ ಮೊದಲ ಹಂತದಲ್ಲಿ 40 ಕೋಟಿ ರೂ. ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಹಾಗೆಯೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ, ನೈಸರ್ಗಿಕ ವಿಕೋಪದಿಂದ ಜಿಲ್ಲೆಗೆ ಆಗಿರುವ ನಷ್ಟದ ಬಗ್ಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ಆಟೋ ಮತ್ತು ಟ್ಯಾಕ್ಸಿ ಡ್ರೈವರ್‌ಗಳಿಗೆ ಸರ್ಕಾರ ನೀಡಿರುವ ಹಣಕಾಸಿನ ನೆರವು ಪಡೆಯುವಲ್ಲಿ ತಾಂತ್ರಿಕ ತೊಂದರೆಗಳು ಎದುರಾಗಿವೆ. ಈ ಸಮಸ್ಯೆಯ ಬಗ್ಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಯಿತು” ಎಂದು ಭಟ್ ಹೇಳಿದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…