Featured

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ರಾಜ್ಯ ಸರ್ಕಾರವು ಘೋಷಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತಿ ಜಿಲ್ಲೆಗೆ ಒಂದು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಉದ್ದೇಶವು ರಾಜ್ಯದ ಜನತೆಗೆ ವೈದ್ಯಕೀಯ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆಗೆ ಅವಶ್ಯಕವಾಗಿದ್ದು, ಹೆಚ್ಚಿನ ಜಿಲ್ಲೆಗಳು ಸರಕಾರಿ ಮೆಡಿಕಲ್ ಕಾಲೇಜು ಹೊಂದಿದ್ದು, ಕಳೆದ ಬಜೆಟ್‌ನಲ್ಲಿ ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಿಸಲಾಗಿರುತ್ತದೆ.

ಇದನ್ನೂ ಓದಿ:

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಗತ್ಯವಿದ್ದು, ಜಿಲ್ಲೆಯ ಜನರ ಹಲವು ದಶಕಗಳ ಕನಸಾಗಿರುತ್ತದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾದರೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಸಿಕ್ಕಿದಂತಾಗುತ್ತದೆ ಮತ್ತು ಸಾರ್ವಜನಿಕರಿಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಉತ್ತಮ ಅವಕಾಶವೂ ಸಿಗಲಿದೆ.

ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುಕೂಲವಾಗುವಂತೆ ಈಗಾಗಲೇ ಸರಕಾರಿ ಜಾಗವನ್ನು ಗುರುತಿಸಲಾಗಿದೆ. ಉಪ್ಪೂರು ಗ್ರಾಮದ ಸರ್ವೆ ನಂಬರ್ 293/1ಎ1 ರಲ್ಲಿ 18.80 ಎಕ್ರೆ ಮತ್ತು 232ರಲ್ಲಿ 12.00 ಎಕ್ರೆ ಸರಕಾರಿ ಜಾಗವನ್ನು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಕಾಯ್ದಿರಿಸಲಾಗಿದ್ದು, ಅಗತ್ಯ ಮೂಲಸೌಕರ್ಯಗಳೊಂದಿಗೆ ಈ ಜಾಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಲು ಅತ್ಯಂತ ಅನುಕೂಲಕರ ಪರಿಸ್ಥಿತಿಯಿದೆ.ರಾಜ್ಯ ಸರ್ಕಾರವು ಈ ವಿಷಯಕ್ಕೆ ವಿಶೇಷ ಆದ್ಯತೆ ನೀಡಿ ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಿಸಿ, ತ್ವರಿತವಾಗಿ ಆಡಳಿತಾತ್ಮಕ ಅನುಮತಿ ನೀಡುವಂತೆ ಮತ್ತು ಅಗತ್ಯ ಅನುದಾನವನ್ನು ಮೀಸಲಿಡುವಂತೆ ಶಾಸಕ ಯಶ್ ಪಾಲ್ ಸುವರ್ಣ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಿಗೆ ಮನವಿ ಮಾಡಿದರು.

ಇದನ್ನೂ ಓದಿ:

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಈಗಾಗಲೇ ಪ್ರತಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸುವ ಭರವಸೆ ನೀಡಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago