ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಆಗಮಿಸಲಿದ್ದ ಬಜರಂಗದಳದ ಪ್ರಮುಖರಾದ ಪುನೀತ್ ಅತ್ತಾವರ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿರುವ ಕ್ರಮವನ್ನು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ.
ದೇಶ ವಿಭಜನೆಯ ಇತಿಹಾಸವನ್ನು ಜನರಿಗೆ ತಿಳಿಸಿ, ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ. ಇಂತಹ ಕ್ರಮಗಳಿಂದ ಹಿಂದೂಗಳ ಧ್ವನಿಯನ್ನು ಅಡಗಿಸಿ, ಹಿಂದುತ್ವದ ಕಾರ್ಯದಿಂದ ವಿಮುಖರನ್ನಾಗಿಸಬಹುದು ಎಂಬುದು ಮೂರ್ಖತನ ಎಂದು ವಿಹಿಂಪ ತಿಳಿಸಿದೆ.
ಇಂತಹ ಹಲವು ನಿರ್ಬಂಧ ಹಾಗೂ ನಿಷೇಧಗಳನ್ನು ಎದುರಿಸಿಯೇ ವಿಶ್ವ ಹಿಂದೂ ಪರಿಷದ್ ದೇಶಾದ್ಯಂತ ತನ್ನ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದೆ. ಹಿಂದೂ ವಿರೋಧಿ ಧೋರಣೆಗಳನ್ನು ಜಿಲ್ಲಾಡಳಿತ ಕೈಬಿಡಬೇಕು ಹಾಗೂ ವಿಧಿಸಿರುವ ನಿರ್ಬಂಧಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಈ ಕುರಿತು ವಿಶ್ವ ಹಿಂದೂ ಪರಿಷತ್ತಿನ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…