ಉಡುಪಿ(Vishwanews24): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ
ಸಲುವಾಗಿ ಸಾರ್ವಜನಿಕರು ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲೆಯ ಜನತೆಯಲ್ಲಿ ಮನವಿ
ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ
ಸಲುವಾಗಿ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಶುಕ್ರವಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಿಸಲಾಗುತ್ತಿದ್ದು, ಈ
ಲಸಿಕೆಯಿಂದ ಯಾವುದೇ ರೀತಿಯ ಅಪಾಯ ಉಂಟಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರು ಲಸಿಕೆ ಕುರಿತು ಯಾವುದೇ ಭಯಪಡದೆ
ಪಡೆದುಕೊಳ್ಳುಬೇಕು. ಈ ಮೂಲಕ ಕೊರೋನಾವನ್ನು ಜಿಲ್ಲೆಯಿಂದ ಹೊಡೆದೋಡಿಸಲು ಸಹಕಾರ ನೀಡಿದಂತಗುತ್ತದೆ ಎಂದರು.
ಇದೇ ವೇಳೆ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಂದ ಬರುವವರಿಗೆ ಯಾವುದೇ ನಿರ್ಭಂಧವಿಲ್ಲ ಆದರೆ ಮಹಾರಾಷ್ಟ್ರ
ಮತ್ತು ಕೇರಳದಿಂದ ಬರುವವರಿಗೆ ಆಕ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಎಂಐಟಿ ಕ್ಯಾಂಪಸ್‌ನಲ್ಲಿ 1000 ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದ
ಹಿನ್ನೆಲೆಯಲ್ಲಿ ಕ್ಯಾಂಪಸ್ ನ್ನು ಸೀಲ್ ಡೌನ್ ಮಾಡಲಾಗಿದೆ. ಇದರೊಂದಿಗೆ ಮಾಂಡವಿ ಅಪಾಟ್ರ್ಮೆಂಟ್ ನ್ನು ಕೂಡಾ ಸೀಲ್ ಡೌನ್ ಮಾಡಲಾಗಿದ್ದು, ಹೆಚ್ಚು
ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳನ್ನು ಅಲ್ಲಿಯೇ ಸೀಲ್ ಡೌನ್ ಮಾಡಿ ಕಂಟೈನ್ ಮಾಡುವ ಕೆಲಸ ನಡೆಯುತ್ತಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…