ಉಡುಪಿ, : ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಿಜಿಗಳು ಕಡ್ಡಾಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಡಿ.31 ರೊಳಗೆ ನೊಂದಣಿ ಮಾಡಬೇಕು. ಇಲ್ಲವಾದಲ್ಲಿ ಜ.1ರಿಂದ ಅಂತಹ ಪಿಜಿ ಗಳನ್ನು ಬಂದ್ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಈ ಮೊದಲು ಪಿಜಿಗಳ ನೊಂದಾವಣೆಗಾಗಿ ಪತ್ರಿಕಾ ಪ್ರಕಟಣೆ ನೀಡಿದ್ದು, ಆ ಸಂದರ್ಭದಲ್ಲಿ ಕೇವಲ 8 ಸಂಸ್ಥೆಗಳು ಮಾತ್ರ ನೊಂದಣಿಗಾಗಿ ಅರ್ಜಿ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಹಲವು ಅನಧಿಕೃತ ಪಿಜಿಗಳು ಕಾರ್ಯ ನಿರ್ವಹಿಸು ತ್ತಿದ್ದವು. ವಿದ್ಯಾಭ್ಯಾಸ ನಿರತ ಮತ್ತು ಉದ್ಯೋಗಸ್ಥ ಮಹಿಳೆಯರು ವಾಸಿಸಲು ಅನುಮ ಮಾಡಿಕೊಟ್ಟಿರುವ ಪಿಜಿಗಳು ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಪಿಜಿ ಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ನೋಂದಣಿಯಾಗಬೇಕು ಎಂದರು.
ನೋಂದಣಿಯಾದ ಪಿಜಿಗಳ ವಿವರಗಳನ್ನು ಜಿಲ್ಲೆಯ ಆರಕ್ಷಕ ಠಾಣೆಗೆ ರವಾನಿಸಿ, ಠಾಣೆಯಿಂದ ಪ್ರಮಾಣ ಪತ್ರ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಪಿ.ಜಿಗಳಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಮಹಿಳೆಯರಿಗೆ ಅಗತ್ಯ ಸುರಕ್ಷಾ ಕ್ರಮಗಳನ್ನು ಮತ್ತು ಎಲ್ಲ ರೀತಿಯ ಸೂಕ್ತ ಸೌಲಭ್ಯ ಗಳನ್ನು ಒದಗಿಸಬೇಕು ಎಂದು ಪಿಜಿಗಳ ಮುಖ್ಯಸ್ಥರಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಾ ಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…