Featured

ಉಡುಪಿ :  ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ :  ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು  ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಗೆ 2021 ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕೋವಿಡ್19 ಲಸಿಕೆ ಸರಬರಾಜು ಆಗುವ ನಿರೀಕ್ಷೆಯಿದ್ದು, ಈ ಲಸಿಕೆಯನ್ನು ಪ್ರಾಥಮಿಕವಾಗಿ ಕರೋನಾ ವಿರುದ್ದ ಹೋರಾಡುತ್ತಿರುವ ಫ್ರಂಟ್ಲೈನ್ ವರ್ಕರ್ ಗಳಾದ ಆರೋಗ್ಯ ಕ್ಷೇತ್ರದಲ್ಲಿನ ಸಿಬ್ಬಂದಿಗೆ ನೀಡಬೇಕಾಗಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಯ ಡಾಟಾ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಲಸಿಕೆ ನೀಡಲು ಗುರುತಿಸಲಾಗಿರುವ ಪ್ರತಿಯೊಬ್ಬರಿಗೂ 2 ಡೋಶ್ ಲಸಿಕೆ ನೀಡಲು ನಿರ್ಧರಿಸಲಗದಿದು, ಲಸಿಕೆ ನೀಡುವ ಕುರಿತಂತೆ ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ, ಲಸಿಕೆ ಸಂಗ್ರಹ ಕೊಠಡಿ ಸಿದ್ದಪಡಿಸಲಾಗಿದ್ದು, ಲಸಿಕೆ ಸಾಗಾಟಕ್ಕೆ 1324 ವಾಹನಗಳನ್ನು ಗುರುತಿಸಿದ್ದು, 100 ಮಂದಿಗೆ ಒಂದು ಸ್ಥಳದಲ್ಲಿ ಲಸಿಕೆ ನೀಡಲು ನಿರ್ಧರಿಸಿದ್ದು, 342 ಸರ್ಕಾರಿ ಮತ್ತು 18 ಖಾಸಗಿ ಸ್ಥಳಗಳನ್ನು ಗುರುತಿಸಲಾಗಿದೆ, ಪ್ರತಿ ಲಸಿಕಾ ಕೇಂದ್ರದಲ್ಲಿ 5 ಮಂದಿ ಕರ್ತವ್ಯ ನಿರ್ವಹಿಸಲಿದ್ದು, ಲಸಿಕೆ ಪಡೆಯುಲು ಬರವವರಿಗೆ ನಿರೀಕ್ಷಣಾ ಕೊಟಡಿ, ಲಸಿಕೆ ನೀಡುವ ಕೊಠಡಿ ಮತ್ತು ಲಸಿಕೆ ನೀಡಿದ ನಂತರ ಅಬ್ರ್ವೇಷನ್ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ಜಗದೀಶ್ ವಿವರಿಸಿದರು.

ಈಗಾಗಲೇ ಗುರುತಿಸಲಾಗಿರುವ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಲಸಿಕೆ ನೀಡುವ ಸ್ಥಳ, ಸಮಯದ ಕುರಿತು ಎಸ್.ಎಂ.ಎಸ್ ಮೂಲಕ ಸಂದೇಶ ಬರಲಿದ್ದು, ಇದರಲ್ಲಿ ಯಾವ ಲಸಿಕೆ ನೀಡಲಾಗುವುದು ಎಂಬ ಬಗ್ಗೆ ಸಂಪೂರ್ಣ ವಿವರ ಇರಲಿದ್ದು, ಎರಡು ಹಂತದ ಡೋಸ್ ಲಸಿಕೆ ನೀಡಿದ ಬಳಿಕ, ಅವರಿಗೆ ಲಸಿಕೆ ಪಡೆದ ಕುರಿತು ಪ್ರಮಾಣಪತ್ರ ಸಹ ವಿತರಿಸಲಾಗುವುದು ಎಂದು ಡಿಸಿ ಹೇಳಿದರು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಡಿ.ಹೆಚ್.ಓ.ಡಾ.ಸುದೀರ್ ಚಂದ್ರ ಸೂಡಾ, ಆರೋಗ್ಯ ಇಲಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

9 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

9 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

10 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

10 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

11 hours ago