ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಪಾಸಿಟಿವ್ ಬಂದವರ ಸಂಖ್ಯೆ 107 ಕ್ಕೆ ಇಳಿದಿದ್ದು ಓರ್ವ ವೃದ್ಧ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ.
306 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸದ್ಯ 2683 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 363ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 107 ಮಂದಿಯಲ್ಲಿ ಉಡುಪಿ ತಾಲೂಕಿನ 50, ಕುಂದಾಪುರ ತಾಲೂಕಿನ 39 ಹಾಗೂ ಕಾರ್ಕಳ ತಾಲೂಕಿನ 17 ಮಂದಿ ಇದ್ದು, ಉಳಿದ ಒಬ್ಬರು ಹೊರಜಿಲ್ಲೆಗಳಿಂದ ಬಂದವರು. ಇವರಲ್ಲಿ 10 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 97 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ನಿನ್ನೆ ಒಟ್ಟು 306 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 61461 ಕ್ಕೇರಿದೆ. ಸೋಮವಾರ ಜಿಲ್ಲೆಯಲ್ಲಿ 2096 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 64507 ಆಗಿದೆ ಎಂದು ಡಾ.ಉಡುಪ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…