ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 169 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13912 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಉಡುಪಿಯ 95, ಕುಂದಾಪುರದ 47, ಕಾರ್ಕಳದ 22 ಹಾಗೂ ಇತರೆ ಜಿಲ್ಲೆಗಳ 5 ರೋಗಿಗಳು ಇದ್ದಾರೆ. 76 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 93 ಮಂದಿಗೆ ಲಕ್ಷಣಗಳು ಇಲ್ಲ.
ಶನಿವಾರ 915 ವರದಿಗಳು ನೆಗೆಟಿವ್ ಬಂದಿದ್ದು, 169 ಪಾಸಿಟಿವ್ ಬಂದಿವೆ. 451 ವರದಿಗಳು ಬರುವುದು ಬಾಕಿ ಇದೆ.
ಶನಿವಾರ ಒಟ್ಟು 238 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇದುವರೆಗೂ 12022 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1760 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಶನಿವಾರ 2 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಇದುವರೆಗೆ ಕೊರೋನಾದಿಂದ ಒಟ್ಟು 130 ಮಂದಿ ಸಾವನಪ್ಪಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…